ಇಸ್ಲಾಮಾಬಾದ್: ಪಾಕ್ ನಲ್ಲಿ ನಡೆದ ಚುನಾವಣೆಯಲ್ಲಿ ಮಾಜಿ ಪ್ರಧಾನಿ ನವಾಜ್ ಷರೀಫ್ (Nawaz Sharif) ಲಾಹೋರ್ ಕ್ಷೇತ್ರದಲ್ಲಿ ಯಾಸ್ಮಿನ್ ರಶೀದ್ ವಿರುದ್ಧ 55 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.
ಸಾಕಷ್ಟು ಹಿಂಸಾಚಾರದ ನಂತರ ಪಾಕಿಸ್ತಾನದಲ್ಲಿ (Pakistan) ಮತದಾನ ನಡೆದಿತ್ತು. ನಿನ್ನೆ ದೇಶದಲ್ಲಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪಾಕ್ ನಲ್ಲಿ 265 ಕ್ಷೇತ್ರಗಳ ಪೈಕಿ 13 ಸ್ಥಾನಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಸ್ವತಂತ್ರವಾಗಿ ಸ್ಪರ್ಧಿಸಿದ್ದ ಇಮ್ರಾನ್ ಖಾನ್ (Imran Khan) ಬೆಂಬಲಿತ ಅಭ್ಯರ್ಥಿಗಳು ಐದು ಸ್ಥಾನ ಪಡೆದಿದ್ದರೆ, ನಾಲ್ಕು ಸ್ಥಾನಗಳನ್ನು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಪಕ್ಷವಾಗಿರುವ ಪಾಕಿಸ್ತಾನ್ ಮುಸ್ಲಿಂ ಲೀಗ್ (Pakistan Muslim League) ಗೆದ್ದುಕೊಂಡಿದೆ. ಮುಂಬಯಿ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪುತ್ರ ತಲ್ಹಾ ಹಫೀಜ್ ಸಯೀದ್ ಲಾಹೋರ್ ಕ್ಷೇತ್ರದಿಂದ ಸೋತಿದ್ದಾನೆ.
ಪ್ರಧಾನಿ ಬೆನಜೀರ್ ಭುಟ್ಟೊ (Benazir Bhutto) ಅವರ ಪುತ್ರ, ಜರ್ದಾರಿಯ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಬಿಲಾವಲ್ ಭುಟ್ಟೋ ಮೂರು ಸ್ಥಾನ ಗೆದ್ದಿದ್ದಾರೆ. 12 ಕೋಟಿಗೂ ಅಧಿಕ ಮತದಾರರು ಮತ ಚಲಾಯಿಸಿದ್ದಾರೆ.