ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿದ ಎನ್’ಸಿಬಿ
ಮುಂಬೈ, ಸೆಪ್ಟೆಂಬರ್08: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಂಗಳವಾರ ರಿಯಾ ಚಕ್ರವರ್ತಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಟಿಯನ್ನು ಬಂಧಿಸಲು ನಾರ್ಕೋಟಿಕ್ಸ್ ಬ್ಯೂರೋಗೆ ಅನುಮತಿ ಸಿಕ್ಕಿದೆ ಎಂದು ಮೂಲಗಳು ಈ ಹಿಂದೆ ತಿಳಿಸಿದ್ದು, ನ್ಯಾಯಾಲಯ ಸಂಜೆ 5 ಗಂಟೆಗೆ ಮುಚ್ಚುವುದರಿಂದ ಎನ್‌ಸಿಬಿ ಅವಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಧೀಶರ ಮುಂದೆ ಹಾಜರು ಪಡಿಸಬಹುದು ಎಂದು ಹೇಳಲಾಗಿದೆ.
ಸುಶಾಂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕವಸ್ತು ಪ್ರಕರಣವೊಂದು ಹೊರಬಿದ್ದ ನಂತರ ಚಕ್ರವರ್ತಿ ಸತತ ಮೂರು ದಿನ ಹೆಚ್ಚಿನ ವಿಚಾರಣೆಗಾಗಿ ಮುಂಬೈನ ಎನ್‌ಸಿಬಿ ಕಚೇರಿಗೆ ಹಾಜರಾಗಿದ್ದರು.
ಸುಶಾಂತ್ ಸಹೋದರಿ ಪ್ರಿಯಾಂಕಾ ಸಿಂಗ್, ಡಾ.ತರುಣ್ ಕುಮಾರ್ ಮತ್ತು ಇತರರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳು ಮತ್ತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.