‘ರಾಜಕೀಯ ಪೈಲ್ವಾನ್’ ಶರದ್ ಪವಾರ್ ಗೆ ಅನಾರೋಗ್ಯ – ಶಸ್ತ್ರ ಚಿಕಿತ್ಸೆ ಅಗತ್ಯ..!
ಮುಂಬೈ : ರಾಜಕೀಯ ಪೈಲ್ವಾನ್ , ಎನ್ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಶೀಘ್ರವೇ ಶಸ್ತ್ರ ಚಿಕಿತ್ಸೆ ಅಗತ್ಯವಿರೋದಾಗಿ ವೈದ್ಯರು ತಿಳಿಸಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿದೆ.
ಹೌದು ಶರದ್ ಪವಾರ್ ಅವರ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗ, ಅವರ ಪಿತ್ತಕೋಶದಲ್ಲಿ ಕಲ್ಲುಗಳು ಇರುವುದನ್ನು ವೈದ್ಯರು ಪತ್ತೆಹಚ್ಚಿದ್ದಾರೆ. ಹೀಗಾಗಿ ಇಂದಿನಿಂದ ಮುಂದಿನ ಪ್ರಕಟನೆಯವರೆಗೂ ಅವರ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಲಾಗಿದೆ ಎಂದು ಎನ್ ಸಿಪಿ ವಕ್ತಾರ ನವಾಬ್ ಮಲಿಕ್ ತಿಳಿಸಿದ್ದಾರೆ.
ಅವರನ್ನು 2021ರ ಮಾರ್ಚ್ 31ರಂದು ಆಸ್ಪತ್ರೆಗೆ ದಾಖಲಿಸಲಾಗುವುದು. ಎಂಡೋಸ್ಕೋಪ ಮತ್ತು ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಹೀಗಾಗಿ ಅವರ ಮುಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
‘ಬಾಹುಬಲಿ’ಯ ಕಾರ್ ಕಲೆಕ್ಷನ್ ಗೆ ಸೇರಿದ ಹೊಸ ದುಬಾರಿ ಕಾರ್..! ಬೆಲೆ ಕೇಳುದ್ರೆ ಶಾಕ್ ಆಗ್ತೀರಾ..!