ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್
ಮುಂಬೈ : NCP ವರಿಷ್ಠ ಶರದ್ ಪವಾರ್ ಅವರು ನಾನು ರಾಷ್ಟ್ರಪತಿ ಚುನಾವಣೆಯ ಬಗ್ಗೆ ಮಾತನಾಡಿದ್ದು, ತಾವು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ ಎಂದಿದ್ದಾರೆ. ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮುಂಬೈನಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ.. ಅಲ್ಲದೆ 2024ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯೂ ಅಲ್ಲ ಎಂದು ತಿಳಿಸಿದ್ದಾರೆ.
ದೇಶದ್ರೋಹ ಕಾನೂನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿ ಪರಿಶೀಲನೆಗೆ ಸುಪ್ರೀಂ ಅಸ್ತು
300ಕ್ಕೂ ಅಧಿಕ ಸಂಸದರನ್ನು ಹೊಂದಿರುವ ಪಕ್ಷ ಆಡಳಿತ ನಡೆಸುತ್ತಿದೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ನನಗೆ ತಿಳಿದಿದೆ. ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಆಗಲಾರೆ.
ಅಂತೆಯೇ 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಅಥವಾ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಬಗ್ಗೆ ಈಗ ಯಾವ ನಿರ್ಧಾರ ಕೈಗೊಂಡಿಲ್ಲ. ಚುನಾವಣೆಗಳು ಇನ್ನೂ ದೂರ ಇವೆ. ರಾಜಕೀಯ ಸನ್ನಿವೇಶಗಳೂ ಬದಲಾಗುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.