ಬೆಂಗಳೂರು: ಬಿಜೆಪಿ ಹಾಗೂ ಎನ್ ಡಿಎಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ. ಕೇಂದ್ರ ಸರ್ಕಾರ (NDA Government) ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ (Siddaramaia) ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸಿಎಂ ಎಸ್. ನಿಜಲಿಂಗಪ್ಪ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಿಜಲಿಂಗಪ್ಪ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಂಸತ್ ನಲ್ಲಿ ಕೇಂದ್ರದಿಂದ ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ (Waqf Act Bill) ಮಂಡನೆ ಕುರಿತು ಮಾತನಾಡಿ, ಎನ್‌ಡಿಎ ಸರ್ಕಾರ ಜಾತ್ಯಾತೀತ ಸರ್ಕಾರ ಅಲ್ಲ. ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ. ಎನ್‌ಡಿಎ ಕೂಟ ಕಮ್ಯುನಲ್ ಪಾರ್ಟಿಗಳು, ಫ್ಯಾಸಿಸ್ಟ್ ಮನಸ್ಥಿತಿ ಇರುವರು ಇರುವ ಕೂಟ ಅದು ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿ.ಕೆ ಹರಿಪ್ರಸಾದ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ನಮ್ಮ ಪಕ್ಷದ ನಾಯಕರು. ಅವರು ನನ್ನನ್ನು ಭೇಟಿಯಾಗುವುದರಲ್ಲಿ ಯಾವುದೇ ವಿಶೇಷ ಇಲ್ಲ. ತುಂಬಾ ದಿನಗಳಿಂದ ಅವರು ಭೇಟಿಯಾಗಿರಲಿಲ್ಲ. ಹೀಗಾಗಿ ನಿನ್ನೆ ಭೇಟಿಯಾಗಿ ಮಾತಾಡಿದ್ದಾರೆ. ಉಭಯ ಕುಶಲೋಪರಿ ಮಾತಾಡಿದ್ದೇವೆ ಅಷ್ಟೆ. ಅದರಲ್ಲಿ ಬೇರೆ ಏನನ್ನೂ ಬೇರಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.