ಪೊಲೀಸರಿಗೆ ಎನ್ ಡಿಎ ಮಾದರಿ ತರಬೇತಿ Basavaraja bommai saaksha tv
ಹುಬ್ಬಳ್ಳಿ : ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ಹುಬ್ಬಳ್ಳಿಯಲ್ಲಿ ಇಂದು ಕಸಬಾ ಪೇಟೆ ಪೊಲೀಸ್ ಠಾಣೆ , ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಮಾರಂಭದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುಣೆಯ ಕಡಕ್ವಾಸ್ಲಾದಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು. ಈ ಬಗ್ಗೆ ಈಗಾಗಲೇ ಕೇಂದ್ರ ಗೃಹ ಸಚಿವರ ಜೊತೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.









