ರಾಜ್ಯದ ಜನರೇ ಎಚ್ಚರ… ಮತ್ತೆ 6,029 ಕೊರೊನಾ ಸೋಂಕಿತರು ನಾಪತ್ತೆ..!
ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಇದ್ರಿಂದಾಗಿ ಜನರು ಆತಂಕಗೊಂಡಿದ್ದಾರೆ.
ಮತ್ತೊಂದೆಡೆ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದೆ… ಆಧ್ರೆ ಇದ್ರ ಬೆನ್ನಲ್ಲೇ ಮತ್ತೊಂದುಯ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.. 6,029 ಜನ ಕೊರೊನಾ ಸೋಂಕಿತರು ಈವರೆಗೂ ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ ನಾಪತ್ತೆಯಾಗಿದ್ದು, ಇನ್ನೂ ಪತ್ತೆಯಾಗಿಲ್ಲ. ಇದೀಗ ಮತ್ತೆ 6,029 ಜನ ಕಾಣೆಯಾಗಿದ್ದಾರೆ. ಇದ್ರಿಂದಾಗಿ ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ.. ಅದ್ರಲ್ಲೂ ಕಾಣೆಯಾಗಿರುವ ಯಾರೊಬ್ಬರೂ ಸಹ ಸಂಪರ್ಕ್ಕೆ ಸಿಗುತ್ತಿಲ್ಲ ಎನ್ನಲಾಗ್ತಿದೆ. ಜೊತೆಗೆ ಲಾಕ್ ಡೌನ್ ಹೇರಿರುವ ಪರಿಣಾಮ ಸಾವಿರಾರು ಜನರು ಬೆಂಗಳೂರು ಬಿಟ್ಟು ಊರುಗಳನ್ನ ಸೇರಿದ್ದು, ಇನ್ನೂ ವ್ಯಾಪಕವಾಗಿ ಸೋಂಕು ಹರಡುವ ಭೀತಿ ಎದುರಾಗಿದೆ.
ದಿನೇ ದಿನೇ ನಾಪತ್ತೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೊಬೈಲ್ ನಂಬರ್ ಹಾಗೂ ವಿಳಾಸ ತಪ್ಪು ಕೊಡುತ್ತಿದ್ದಾರೆ. ಇನ್ನೂ ಹಲವರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಪಾಸಿಟಿವ್ ಆದವರನ್ನು ಪತ್ತೆ ಮಾಡು ಕಷ್ಟವಾಗಿದೆ.








