ಬೆಂಗಳೂರು : ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಬಿಜೆಪಿ ಏಜೆಂಟ್ ಎಂದು ಆರೋಪಿಸಿ “ಮಿಸ್ಟರ್ ಕಮಿಷನರ್ ಬಿ ಕೇರ್ ಪುಲ್” ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಿಎಂ ಬಿಎಸ್ ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ವೈ. ವಿಜಯೇಂದ್ರ, ಡಿ.ಕೆ.ಶಿವಕುಮಾರ್ ಅವರೇ ಅಂಗೈ ಹುಣ್ಣಿಗೆ ಕನ್ನಡಿ ಬೇಕೇ? ಎಂಬಂತೆ ಗಲಭೆಯ ಕ್ರೌರ್ಯಕ್ಕೆ ತುತ್ತಾದ ನಿಮ್ಮ ಶಾಸಕರೇ ಇದು ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡ ಎಂದು ಹೇಳಿದ್ದಾರೆ. ಇದರಿಂದ ವಿಚಲಿತರಾಗಿರುವ ನೀವು ಇದೀಗ ಪೊಲೀಸ್ ಅಧಿಕಾರಿಗಳನ್ನು ಬೆದರಿಸುವ ಮಾರ್ಗ ತುಳಿದಿದ್ದೀರಿ, ಇದು ನಿಮ್ಮ ಹತಾಶೆ ಹಾಗೂ ಭಂಡತನವನ್ನು ಸಾಕ್ಷೀಕರಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.








