Javelin throw: ಡೈಮಂಡ್ ಲೀಗ್ ನಲ್ಲಿ ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ..
ಟೋಕಿಯೋ ಒಲಂಪಿಕ್ ಚಿನ್ನದ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಮೊದಲ ಪ್ರಯತ್ನದಲ್ಲೇ 89.08 ಮೀಟರ್ ದೂರ ಎಸೆದು ಜಯ ದಾಖಲಿಸಿದ್ದಾರೆ. ಇದರೊಂದಿಗೆ ಡೈಮಂಡ್ ಲೀಗ್ ಕೂಟದ ಪ್ರಶಸ್ತಿ ಗೆದ್ದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ಸೆಪ್ಟೆಂಬರ್ 7 ಮತ್ತು 8 ರಂದು ನಡೆಯಲಿರುವ ಡೈಮಂಡ್ ಲೀಗ್ ನ ಫೈನಲ್ ಗೂ ಅರ್ಹತೆ ಪಡೆದುಕೊಂಡಿದ್ದಾರೆ. ಅಲ್ಲದೇ ಮುಂದಿನ ವರ್ಷ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೂ ಅರ್ಹತೆ ಪಡೆದಿದ್ದಾರೆ.
https://twitter.com/i/status/1563234616961826817
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸಂದರ್ಭದಲ್ಲಿ ಫೈನಲ್ ವೇಳೇ ನೀರಜ್ ಚೋಪ್ರಾ ಗಾಯಗೊಂಡಿದ್ದರು. ತೊಡೆಯ ನೋವಿನ ನಡುವೆಯೂ 88.13 ಮೀಟರ್ ದೂರ ಜಾವೆಲಿನ್ ಎಸೆದು ಬೆಳ್ಳಿ ಪದಕ ಗೆದ್ದಿದ್ದರು.
ವಿಶ್ವ ಅಥ್ಲೆಟಿಕ್ಸ್ ಪಂದ್ಯಾವಳಿಯ ನಂತರ ನೀರಜ್ ಚೋಪ್ರಾ MRI ಸ್ಕ್ಯಾನ್ ಗೆ ಒಳಗಾಗಿದ್ದರು. ತೊಡೆಸಂದಿನ ನೋವಿನಿಂದಾಗಿ ನೀರಜ್ ಚೋಪ್ರಾ 1 ತಿಂಗಳ ಕಾಲ ವಿಶ್ರಾಂತಿ ಪಡೆದಿದ್ದರು. ಇದರಿಂದಾಗಿ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ನಂತರ ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದಿಡಲು ಸಾಧ್ಯವಾಗದೆ ನಿರಾಶೆಗೊಂಡಿದ್ದೇನೆ ಎಂದು ಪೋಸ್ಟ್ ಬರೆದುಕೊಂಡಿದ್ದರು.
ಸ್ಟಾಕ್‌ಹೋಮ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ 89.94 ಮೀಟರ್ ಎಸೆದು ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ. ಇದು ಅವರ ವೈಯಕ್ತಿಕ ಶ್ರೇಷ್ಠ ದಾಖಲೆಯೂ ಆಗಿತ್ತು.








