Neeraj Chopra : ನೀರಜ್ ಚೋಪ್ರಾ ಹೊಸ ದಾಖಲೆ
ಟೊಕಿಯೋ ಒಲಿಂಪಿಕ್ಸ್ ನಲ್ಲಿ ಸ್ವರ್ಣ ಪದಕ ಗೆದ್ದಿದ್ದ ನೀರಜ್ ಚೋಪ್ರಾ ಇದೀದ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.
ಟೊಕಿಯೋ ಒಲಿಂಪಿಕ್ಸ್ ಬಳಿಕ ಮತ್ತೆ ಅಖಾಡಕ್ಕೆ ಧುಮುಕಿರುವ ನೀರಜ್ ಚೋಪ್ರಾ ಜಾವಲಿನ್ ಥ್ರೋ ವಿಭಾಗದಲ್ಲಿ ತಮ್ಮ ಹೆಸರಿನಲ್ಲಿರುವ ದಾಖಲೆಯನ್ನು ಮುರಿದಿದ್ದಾರೆ.
ಫಿನ್ಲಾಂಡ್ ನಲ್ಲಿ ನಡೆಯುತ್ತಿರುವ ಪಾವೊ ನೂರ್ಮಿ ಗೇಮ್ಸ್ನಲ್ಲಿ ಬೆಳ್ಳಿ ಗೆದ್ದ ನೀರಜ್ ಚೋಪ್ರಾ 89.30 ಮೀಟರ್ ದೂರ ಜಾವೆಲಿನ್ ಎಸೆದು ಹೊಸ ದಾಖಲೆ ಬರೆದಿದ್ದಾರೆ.
ಆಗಸ್ಟ್ 7, 2021 ರಂದು ನಡೆದ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ ಫೈನಲ್ ನಲ್ಲಿ ನೀರಜ್ ಚೋಪ್ರಾ 87.58 ಮೀಟರ್ಗಳಷ್ಟು ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕವನ್ನು ಗೆದ್ದಿದ್ದರು.
ಆ ಮೂಲಕ ನೀರಜ್ ಚೋಪ್ರಾ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.