ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಧ್ಯಾನ್ ಚಾಂದ್ ಖೇಲ್ ರತ್ನ ಪ್ರಶಸ್ತಿ ನೀರಜ್ ಚೋಪ್ರಾಗೆ ಸಿಗಬೇಕು – ಬೈಚುಂಗ್ ಭುಟಿಯಾ

admin by admin
September 29, 2021
in Newsbeat, Sports, ಕ್ರೀಡೆ
Neeraj chopra saaksha tv
Share on FacebookShare on TwitterShare on WhatsappShare on Telegram

Related posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

November 26, 2026
ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

November 26, 2026

ಧ್ಯಾನ್ ಚಾಂದ್ ಖೇಲ್ ರತ್ನ ಪ್ರಶಸ್ತಿ ನೀರಜ್ ಚೋಪ್ರಾಗೆ ಸಿಗಬೇಕು – ಬೈಚುಂಗ್ ಭುಟಿಯಾ

Neeraj Chopra saaksha tvನೀರಜ್ ಚೋಪ್ರಾ… 2021ರ ಭಾರತೀಯ ಕ್ರೀಡಾ ರಂಗದ ಸೂಪರ್ ಸ್ಟಾರ್. ಟೋಕಿಯೋ ಒಲಿಂಪಿಕ್ಸ್ ನ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರು ಇತಿಹಾಸವನ್ನೇ ಬರೆದಿದ್ರು. ಒಲಿಂಪಿಕ್ ಕ್ರೀಡಾ ಇತಿಹಾಸದಲ್ಲೇ ಭಾರತಕ್ಕೆ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ತಂದಿರುವುದು ಅದ್ಭುತ ಸಾಧನೆಯಾಗಿದೆ.
ಭಾರತದ ಮಟ್ಟಿಗೆ ಒಲಿಂಪಿಕ್ ಕ್ರೀಡಾಕೂಟದಲ್ಲಿ ಸ್ಪರ್ಧಿಸುವುದೇ ದೊಡ್ಡ ಸಾಧನೆಯಾಗುತ್ತಿತ್ತು. ಅಂತಹುದರಲ್ಲಿ ಪದಕ, ಅದರಲ್ಲೂ ಚಿನ್ನದ ಪದಕ ಗೆಲ್ಲುವುದು ಅಂದ್ರೆ ಅದು ಅಸಾಮಾನ್ಯವೇ ಸರಿ. ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು.
ಇದೀಗ ನೀರಜ್ ಚೋಪ್ರಾ ಅವರು ಪ್ರತಿಷ್ಠಿತ ಧ್ಯಾನ್ ಚಾಂದ್ ಖೇಲ್ ರತ್ನ ಪ್ರಶಸ್ತಿ ಪಡೆಯುವ ರೇಸ್ ನಲ್ಲಿ ನೀರಜ್ ಚೋಪ್ರಾ ಅವರು ಮುಂಚೂಣಿಯಲ್ಲಿದ್ದಾರೆ. ಈ ಪ್ರಶಸ್ತಿ ಪಡೆಯಲು ನೀರಜ್ ಚೋಪ್ರಾ ಎಲ್ಲಾ ಅರ್ಹತೆಗಳನ್ನು ಪಡೆದುಕೊಂಡಿದ್ದಾರೆ. ಆದ್ರೆ ಈ ಪ್ರಶಸ್ತಿ ಪಡೆಯುವುದು ಅಷ್ಟೊಂದು ಸುಲಭವಿಲ್ಲ. ಯಾಕಂದ್ರೆ ಈ ಬಾರಿ ಖೇಲ್ ರತ್ನ ಪ್ರಶಸ್ತಿ ಪಡೆಯಲು ಸಾಕಷ್ಟು ಸ್ಪರ್ಧೆಗಳಿವೆ. ಆದ್ರೂ ನೀರಜ್ ಚೋಪ್ರಾ ಅವರು ಪ್ರಶಸ್ತಿ ರೇಸ್ ನಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ.
ಇದಕ್ಕೆ ಪೂರಕವಾಗಿ ನೀರಜ್ ಚೋಪ್ರಾ ಅವರಿಗೆ ಅರ್ಹವಾಗಿಯೇ ಧ್ಯಾನ್ ಚಾಂದ್ ಪ್ರಶಸ್ತಿ ಸಿಗಬೇಕು ಎಂದು ಭಾರತದ ಮಾಜಿ ಫುಟ್ ಬಾಲ್ ಆಟಗಾರ ಬೈಚುಂಗ್ ಭುಟಿಯಾ ಅವರು ಹೇಳಿದ್ದಾರೆ. ಬೈಚುಂಗ್ ಭುಟಿಯಾ ಅವರು ರಾಷ್ಟ್ರೀಯ ಕ್ರೀಡಾ ಸಮಿತಿಯ ಸದಸ್ಯರು ಕೂಡ ಆಗಿದ್ದಾರೆ.
 Bhaichung Bhutia  saakshatv footballಈ ಬಾರಿ, ಪ್ರಶಸ್ತಿ ಆಯ್ಕೆ ಸಮಿತಿಗೆ ಸಾಕಷ್ಟು ಸವಾಲುಗಳಿವೆ. ಸಾಕಷ್ಟು ಕ್ರೀಡಾಪಟುಗಳು ಪ್ರಶಸ್ತಿ ರೇಸ್ ನಲ್ಲಿದ್ದಾರೆ. ಪ್ರತಿ ಬಾರಿಯೂ ಪ್ರಶಸ್ತಿ ಆಯ್ಕೆ ಸಮಿತಿಯು ಆಯ್ಕೆ ಮಾಡುವಾಗ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿತ್ತು. ಈ ಬಾರಿ ಸ್ವಲ್ಪ ಹೆಚ್ಚು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ನನ್ನ ಪ್ರಕಾರ ಈ ಬಾರಿಯ ಧ್ಯಾನ್ ಚಾಂದ್ ಖೇಲ್ ರತ್ನ ಪ್ರಶಸ್ತಿಯು ನೀರಜ್ ಚೋಪ್ರಾಗೆ ಸಿಗಬೇಕು. ನೀರಜ್ ಚೋಪ್ರಾ ಈ ಪ್ರಶಸ್ತಿ ಪಡೆಯಲು ಅರ್ಹ ಕ್ರೀಡಾಪಟು. ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯಲ್ಲಿ ಮೊದಲ ಬಾರಿ ಭಾರತಕ್ಕೆ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ ಎಂದು ಬೈಚುಂಗ್ ಭುಟಿಯಾ ಹೇಳಿದ್ದಾರೆ.
ಭಾರತೀಯ ಕ್ರೀಡಾಪ್ರಾಧಿಕಾರದ 55ನೇ ಆಡಳಿತ ಮಂಡಳಿಯ ಸಭೆಯಲ್ಲಿ ಬೈಚುಂಗ್ ಭುಟಿಯಾ ಈ ಮಾತನ್ನು ಹೇಳಿದ್ದಾರೆ. ಇದೇ ವೇಳೆ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಬಗ್ಗೆ ಕೂಡ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೇಂದ್ರ ಕ್ರೀಡಾ ಸಚಿವರಿಗೆ ಕ್ರೀಡೆಯ ಬಗ್ಗೆ ಅಪಾರ ಜ್ಞಾನವಿದೆ. ಇಂದಿನ ಸಭೆಯಲ್ಲಿ ಭಾರತದಲ್ಲಿ ಕ್ರೀಡೆಗಳನ್ನು ಯಾವ ರೀತಿ ಅಭಿವೃದ್ದಿ ಪಡಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಯ್ತು. ಹಾಗೇ ಭಾರತೀಯ ಫುಟ್ ಬಾಲ್ ಆಟದ ಬಗ್ಗೆ ಮಾತನಾಡಿದ ಬೈಚುಂಗ್ ಭುಟಿಯಾ, ಫುಟ್ ಬಾಲ್ ಆಟ ಭಾರತದಲ್ಲಿ ಸುಧಾರಣೆಯಾಗಲು ಸಾಕಷ್ಟು ಯೋಜನೆಗಳನ್ನು ರೂಪಿಸಲಾಗಿದೆ. ಆದ್ರೆ ಅದಕ್ಕೆ ತಕ್ಕಂತೆ ಆಗುತ್ತಿಲ್ಲ. ಆದ್ರೂ ಸಮಯವಕಾಶಬೇಕು ಎಂದು ಭುಟಿಯಾ ಅಭಿಪ್ರಾಯಪಟ್ಟಿದ್ದಾರೆ.

Tags: #saakshatvBhaichung BhutiaDhyan Chand Khel Ratna AwardKhel Ratna AwardNeeraj ChopraSportsTokyo Olympics 2021
ShareTweetSendShare
Join us on:

Related Posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

by Shwetha
November 26, 2026
0

ಬೆಂಗಳೂರು: ಜಪಾನ್ ದೇಶದ ವಿಶ್ವದರ್ಜೆಯ ರೈಲ್ವೆ ವ್ಯವಸ್ಥೆ, ಅಲ್ಲಿನ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಅಭೂತಪೂರ್ವ ಅನುಕೂಲತೆಗಳಿಂದ ಪ್ರೇರೇಪಿತರಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಮ್ಮ...

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

by Shwetha
November 26, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸುವ ವಿಚಾರ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಶಾಸಕ...

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

by Shwetha
November 26, 2026
0

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ...

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

by Shwetha
November 26, 2026
0

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಚಿವ...

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

by Shwetha
November 26, 2026
0

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಗದಿತ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೀದಿಗಿಳಿದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram