ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Shwetha by Shwetha
August 10, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ ತಮ್ಮ ಮೌನ ಮುರಿದಿದ್ದಾರೆ. ರಾಜೀನಾಮೆ ನೀಡಿದ ಎರಡು ವಾರಗಳ ಬಳಿಕ ಒಡಿಶಾದ ಭುವನೇಶ್ವರದಲ್ಲಿರುವ ಜಿಎಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾವು ಜನ್ ಜಿ ಅಂದರೆ ಇಂದಿನ ಯುವ ಪೀಳಿಗೆಯ ರಾಜಕಾರಣಕ್ಕೆ ಬಲಿಪಶುವಾಗಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಯುವಜನತೆಯನ್ನು ದಾರಿತಪ್ಪಿಸಲಾಯಿತು

Related posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026
ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

August 10, 2026

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯನ್ನು ಜನ್ ಜಿ ಪ್ರತಿಭಟನೆ ಎಂದು ಬಿಂಬಿಸಲಾಗಿತ್ತು. ಈ ಬಗ್ಗೆ ಮಾತನಾಡಿದ ಪ್ರಧಾನ್, ನೀಟ್ ಪರೀಕ್ಷೆಯ ವಿಚಾರದಲ್ಲಿ ಯುವಜನತೆಗೆ ತಪ್ಪು ಮಾಹಿತಿಯನ್ನು ಫೀಡ್ ಮಾಡಲಾಗಿತ್ತು. ಪ್ರತಿಭಟನಾ ನಿರತ ಯುವಕರನ್ನು ಹಾದಿ ತಪ್ಪಿಸುವ ಮೂಲಕ ನನ್ನ ರಾಜೀನಾಮೆಗೆ ಪಟ್ಟು ಹಿಡಿಯುವಂತೆ ಮಾಡಲಾಯಿತು. ಈ ಸಂಚಿನ ಪರಿಣಾಮವಾಗಿಯೇ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು ಎಂದು ಗಂಭೀರ ಆರೋಪ ಮಾಡಿದ್ದಾರೆ.

ನನಗೆ ಹುದ್ದೆ ಮುಖ್ಯವಲ್ಲ ಮಕ್ಕಳ ಭವಿಷ್ಯವೇ ಮುಖ್ಯ

ಸಚಿವ ಸ್ಥಾನ ಹೋದ ಬಗ್ಗೆ ನನಗೆ ಯಾವುದೇ ವೈಯಕ್ತಿಕ ಬೇಸರವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಭಾರತದಲ್ಲಿ ಪ್ರತಿ ವರ್ಷ ಸುಮಾರು ಎರಡು ಕೋಟಿ ಮಕ್ಕಳು ಜನಿಸುತ್ತಾರೆ. ಕಳೆದ ಹತ್ತು ವರ್ಷಗಳಲ್ಲಿ ಜನಿಸಿದ ಸುಮಾರು 20 ಕೋಟಿ ಮಕ್ಕಳು ಈ ದೇಶದ ಭವಿಷ್ಯ. ಅವರಿಗೆ ದೊಡ್ಡ ಆಕಾಂಕ್ಷೆಗಳಿವೆ ಮತ್ತು ಅವರು ಭಾರತವನ್ನು ವಿಶ್ವಗುರು ಮಾಡುವ ಶಕ್ತಿ ಹೊಂದಿದ್ದಾರೆ. ಅಂತಹ ಮಕ್ಕಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆಗಾಗಿ ನಾನು ನನ್ನ ಹುದ್ದೆಯನ್ನು ತ್ಯಜಿಸಿದ್ದೇನೆ. ನನಗೆ ಅಧಿಕಾರಕ್ಕಿಂತ ಮಕ್ಕಳ ಒಳಿತೇ ಮುಖ್ಯ ಎಂದು ಅವರು ಭಾವುಕರಾಗಿ ನುಡಿದರು.

ನವೀನ್ ಪಟ್ನಾಯಕ್ ವಿರುದ್ಧ ವಾಗ್ದಾಳಿ

ಇದೇ ಸಂದರ್ಭದಲ್ಲಿ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಬಿಜೆಡಿ ಪಕ್ಷದ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದರು. ರೈರಾಖೋಲ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಜಿಡಿ ಕಾರ್ಯಕರ್ತರು ನನ್ನ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿರುವುದು ಮತ್ತು ಪ್ರತಿಭಟನೆ ನಡೆಸುತ್ತಿರುವುದು ನವೀನ್ ಬಾಬು ಅವರ ಕುಮ್ಮಕ್ಕಿನಿಂದಲೇ ನಡೆಯುತ್ತಿದೆ. ನಾನು ಈ ಮಣ್ಣಿನ ಮಗ, ರೈತನ ಮಗ. ನನ್ನನ್ನು ಹಿಂತಿರುಗಿ ಹೋಗಿ ಎಂದು ಹೇಳಿದರೂ ನಾನು ಇಲ್ಲಿಯೇ ಇರುತ್ತೇನೆ. ನನ್ನನ್ನು ಕೆಟ್ಟ ವ್ಯಕ್ತಿ ಎಂದು ಬಿಂಬಿಸಲು ಪ್ರಯತ್ನಿಸಲಾಗುತ್ತಿದೆ. ಆದರೆ ನಾನು ಎಂದಿಗೂ ಒಡಿಶಾದ ಜನತೆಗೆ ಅಥವಾ ಈ ರಾಜ್ಯಕ್ಕೆ ಅವಮಾನ ತರುವಂತಹ ಕೆಲಸ ಮಾಡಿಲ್ಲ ಎಂದು ತಿರುಗೇಟು ನೀಡಿದರು.

ಜಗನ್ನಾಥನ ಆಶೀರ್ವಾದವೇ ಶ್ರೀರಕ್ಷೆ

ಕಳೆದ 12 ವರ್ಷಗಳ ಹಿಂದೆ ಜಗನ್ನಾಥ ದೇವರು ಮತ್ತು ಸಮಲೇಶ್ವರಿ ದೇವಿಯ ಆಶೀರ್ವಾದದಿಂದ ನಾನು ಕೇಂದ್ರ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ಪಡೆದೆ. ರಾಜ್ಯದ ವೈಭವವನ್ನು ಹೆಚ್ಚಿಸಲು ಶ್ರಮಿಸಿದ್ದೇನೆಯೇ ಹೊರತು, ಅಪಖ್ಯಾತಿ ತರುವ ಕೆಲಸ ಮಾಡಿಲ್ಲ. ರಾಜಕೀಯ ವಿರೋಧಿಗಳು ಯುವಕರನ್ನು ಬಳಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದು, ಧರ್ಮೇಂದ್ರ ಪ್ರಧಾನ್ ಅವರ ಈ ಹೇಳಿಕೆಗಳು ಈಗ ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ.

ShareTweetSendShare
Join us on:

Related Posts

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram