ನೀಟ್ ಪರೀಕ್ಷಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ..! NEET saaksha tv
ಬೆಂಗಳೂರು : ನೀಟ್ ಪರೀಕ್ಷಾರ್ಥಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯಿಂದ ಜೆಇಇ, ನೀಟ್ ಪ್ರವೇಶ ಪರೀಕ್ಷೆಗಾಗಿ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.
ಇಂತಹ ತರಬೇತಿ ಕೇಂದ್ರಗಳನ್ನು ಜಿಲ್ಲೆಗೊಂದರಂತೆ ತೆರೆಯಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಶನಿವಾರ ಖಾಸಗಿ ಸುದ್ದಿವಾಹಿನಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಗೊಂದು ನೀಟ್ ತರಬೇತಿ ಶಾಲೆ ಪ್ರಾರಂಭಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು.
ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಶೀಘ್ರವೇ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದರು.