ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸಾರಿಗೆ ಬಸ್ ವೊಂದು ಮನೆಗೆ ನುಗ್ಗಿರುವ ಘಟನೆ ಜಿಲ್ಲೆಯ ಅರಸೀಕೆರೆ (Araseekere) ತಾಲೂಕಿನ, ಅಗ್ಗುಂದ ಗ್ರಾಮದಲ್ಲಿ ನಡೆದಿದೆ.
ಈ ಬಸ್ ಅರಸೀಕೆರೆಯಿಂದ ಹುಳಿಯಾರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದೆ. ಘಟನೆಯಿಂದಾಗಿ ಮನೆ ಜಖಂ ಆಗಿದೆ. ಅಲ್ಲದೇ, ನಾಲ್ಕೈದು ಜನ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ.
ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಹಾಗೂ ಕಾಂಪೌಂಡ್ ನೆಲಕ್ಕುರುಳಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಅರಸೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.