ರಾಜ್ಯದಲ್ಲಿ ಹಂತ ಹಂತವಾಗಿ NEP ಅನುಷ್ಠಾನ NEP saaksha tv
ಬೆಂಗಳೂರು : ರಾಜ್ಯದಲ್ಲಿ ಹಂತ ಹಂತವಾಗಿ ಎನ್ ಇಪಿಯನ್ನು ಅನುಷ್ಠಾನಗೊಳಿಸಿಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ವಿಧಾನ ಸಭಾ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ NEP ಕುರಿತು ಶಿವಾನಂದ್ ಅವರು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಬಿ.ಸಿ. ನಾಗೇಶ್, ಹಂತ ಹಂತವಾಗಿ NEPಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ರಚಿಸಲಾಗಿರುವ ಕಾರ್ಯಪಡೆ ಹಲವು ಬಾರಿ ಸಭೆಗಳನ್ನು ನಡೆಸಿದ್ದು, ಶೀಘ್ರ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.
ಅಲ್ಲದೇ 2030ರ ವೇಳೆಗೆ ಎನ್ ಇಪಿ ಜಾರಿಗೊಳಿಸಲು ಕೇಂದ್ರ ಸೂಚಿಸಿದೆ. ಇದರನ್ವಯ ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಲವು ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ. ಈ ಸಂಬಂಧ ಶಿಕ್ಷಕರಿಗೆ ಅಗತ್ಯತರಬೇತಿಯನ್ನು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಪೂರ್ವ ತಯಾರಿ ಇಲ್ಲದೆ NEP ಜಾರಿಗೊಳಿಸುವುದಿಲ್ಲ ಎಂದರು.
ಇನ್ನು ಪೂರ್ವ ಪ್ರಾಥಮಿಕ ತರಗತಿಗಳನ್ನು ಅಂಗನವಾಡಿಯೊಂದಿಗೆ ವಿಲೀನಗೊಳಿಸುವ ಕುರಿತಂತೆಯೂ ಚಿಂತಿಸಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಈಗಾಗಲೇ ಅಂಗನವಾಡಿ ಶಿಕ್ಷಕರಿಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದು ಸದನಕ್ಕೆ ತಿಳಿಸಿದರು.