ಶಿವಮೊಗ್ಗ: ನೆಟ್ವರ್ಕ್ ಸಮಸ್ಯೆ(Network problem) ಆಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೀಗಾಗಿ ಜನರು ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ. ಮತ್ತಿಮನೆ ಗ್ರಾಮ ಪಂಚಾಯಿತಿಯ ನಗರ, ಸಂಪೇಕಟ್ಟೆ, ನಿಟ್ಟೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಹೆಚ್ಚಾಗಿದ್ದರಿಂದಾಗಿ ಜನರು ಟವರ್ ಏರಿ ಪ್ರತಿಭಟಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಭರವಸೆ ಈಡೇರಿಸುವ ವಾಗ್ದಾನ ಮಾಡಿದ್ದಾರೆ. ವಿದ್ಯುತ್ ಇಲ್ಲದಿದ್ದರೂ ಜನರೇಟರ್ ಮೂಲಕ ನೆಟ್‌ವರ್ಕ್ ಇರುವಂತೆ ನೋಡಿಕೊಳ್ಳಬೇಕು ಎಂದು ಜನರು ಪಟ್ಟು ಹಿಡಿದರು.