ಬಸವರಾಜ ಬೊಮ್ಮಾಯಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ basavaraj-bommai saaksha tv
ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನಕ್ಕೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ರಾಜಭವನದಲ್ಲಿ ನಡೆಯುವ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಉಪ ಮುಖ್ಯಮಂತ್ರಿಗಳೂ ಇಂದೇ ಪ್ರಮಾಣವಚನ..?
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಜತೆ ಉಪಮುಖ್ಯಮಂತ್ರಿಗಳಾಗಿ ಆರ್.ಅಶೋಕ್, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಇಂದೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.
ಇತ್ತ ರಾಜಭವನದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇನ್ನು ರಾಜಭವನದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.