ಪಕ್ಷದಲ್ಲಿ ನನ್ನ ಪಾತ್ರವನ್ನ ಖರ್ಗೆ ನಿರ್ಧರಿಸುತ್ತಾರೆ – ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆಂಧ್ರಪ್ರದೇಶದಲ್ಲಿ ಪತ್ರಿಕಾಗೋಷ್ಠಿ ನಡಸಿದ್ದಾರೆ. ಅಧ್ಯಕ್ಷೀಯ ಚುನಾವಣೆಯ ಕುರಿತು ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ, ಪಕ್ಷದಲ್ಲಿ ರಾಹುಲ್ ಗಾಂಧಿ ಅವರ ಪಾತ್ರದ ಬಗ್ಗೆ ಪರ್ತಕರ್ತರು ಕೇಳಿದಾಗ, “ನನ್ನ ಬಗ್ಗೆ ಅಥವಾ ಕಾಂಗ್ರೆಸ್ ಅಧ್ಯಕ್ಷರ ಪಾತ್ರದ ಬಗ್ಗೆ ನಾನು ಏನನ್ನೂ ಹೇಳಲಾರೆ ಎಂದು ಗಾಂಧಿ ಉತ್ತರಿಸಿದರು. ಆ ಕೆಲಸ (ಮಲ್ಲಿಕಾರ್ಜುನ) ಖರ್ಗೆ ಸಾಹೇಬರಿಗೆ ಸೇರಿದ್ದು. ನನ್ನ ಪಾತ್ರ ಏನು ಎಂಬುದನ್ನು ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಲ್ಲಿ ಚುನಾವಣೆಯ ಬಗ್ಗೆ ಎಲ್ಲರೂ ಪ್ರಶ್ನೆ ಕೇಳುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು. ಕಾಂಗ್ರೆಸ್ ಮುಕ್ತ ಮತ್ತು ಪಾರದರ್ಶಕ ಚುನಾವಣೆ ನಡೆಸಿರುವುದು ನನಗೆ ಹೆಮ್ಮೆ ತಂದಿದೆ. ಬಿಜೆಪಿ ಹಾಗೂ ಇತರೆ ಪ್ರಾದೇಶಿಕ ಪಕ್ಷಗಳು ಸೇರಿದಂತೆ ಇತರೆ ಪಕ್ಷಗಳ ಚುನಾವಣೆಯ ಬಗ್ಗೆ ಯಾರಿಗೂ ಏಕೆ ಆಸಕ್ತಿ ಇಲ್ಲ? ಎಂದು ಪ್ರಶ್ನಿಸಿದ್ದಾರೆ.
ಇಂದು ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆಯಲ್ಲಿ ಬುಧವಾರ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದಾರೆ. ಖರ್ಗೆ 7897 ಮತಗಳನ್ನು ಪಡೆದಿದ್ದಾರೆ. ಇದರೊಂದಿಗೆ 24 ವರ್ಷಗಳ ನಂತರ ಗಾಂಧಿ ಕುಟುಂಬದ ಹೊರಗಿನ ನಾಯಕರೊಬ್ಬರು ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆಗೆ ಮುನ್ನ, ಶಶಿ ತರೂರ್ ಅವರ ಬಣವು ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರಕ್ಕೆ (ಸಿಇಎ) ದೂರು ನೀಡಿತ್ತು. ಶಶಿ ತರೂರ್ ಅವರ ಏಜೆಂಟ್ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದಿದ್ದು, ಯುಪಿಯಲ್ಲಿ ಚುನಾವಣಾ ನಡವಳಿಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದಾರೆ.
New Congress president will decide my role: Rahul Gandhi








