ರಾಜ್ಯಕ್ಕೆ ಬಂದಿಳಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ದೇವನಹಳ್ಳಿ : ಕರ್ನಾಟಕದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನ ಕಂದಾಯ ಸಚಿವ ಆರ್. ಅಶೋಕ್ ಸ್ವಾಗತಿಸಿದರು.
ನಂತರ ಕೆಐಎಎಲ್ನಿಂದ ನೇರವಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ಇನ್ನು ರಾಜ್ಯದ 19 ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ನಾಳೆ ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅವರಿಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ