ನಿರ್ಮಾಪಕ ಸಂದೇಶ್ ರಾಜ್ ಬಂಡವಾಳ ಹೂಡಿರುವ ಹೊಸ ಚಿತ್ರ ಶ್ರೀಕೃಷ್ಣ ಅಟ್ ಜಿ. ಮೇಲ್ ಡಾಟ್ ಕಾಮ್ ನಲ್ಲಿ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಎಲ್ಲರನ್ನು ಕಾಡ್ತಿತ್ತು. ಆದ್ರೆ ಮತ್ತೊಂದೆಡೆ ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಆದರೀಗ ಈ ಚಿತ್ರದ ನಾಯಕಿಯಾಗಿ ನಟಿ ಭಾವನ ಮೆನನ್ ಅವರು ಫಿಕ್ಸ್ ಆಗಿದ್ದಾರೆ.
ನಾಗಶೇಖರ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಭಾವನ ನಾಯಕಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಚಿತ್ರಕ್ಕೆ ಹೆಗಡೆ ಛಾಯಾಗ್ರಹಣ ಇರಲಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಸೆಪ್ಟೆಂಬರ್ 1ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರದ ಬಗೆಗಿನ ಕ್ಯೂರಿಯಾಸಿಟಿ ಹೆಚ್ಚಿಸಿದೆ.
ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!
ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...