New Parliament Building | ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ
ಬೆಂಗಳೂರು : ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ಹೊರಹಾಕಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೋಮವಾರ New Parliament Building ನೂತನ ಸಂಸತ್ ಭವನದ ಮೇಲೆ ಸ್ಥಾಪಿಸಲಾಗಿರುವ 6.5 ಮೀಟರ್ ಎತ್ತರದ ರಾಷ್ಟ್ರ ಲಾಂಛನವನ್ನು ಅನಾವರಣಗೊಳಿಸಿದರು.
ಇದು ಒಟ್ಟು 9,500 ಕೆ.ಜಿ. ತೂಕವಿದ್ದು, 6.5 ಮೀಟರ್ ಎತ್ತರವಿದೆ. ಆದರೆ, ಸಂಸತ್ ಭವನದ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ಅನಾವರಣ ಮಾಡಿದ್ದಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಓವೈಸಿ, ನಮ್ಮ ದೇಶದ ಸಂವಿಧಾನದಲ್ಲಿ ಸರ್ಕಾರ ಮತ್ತು ನ್ಯಾಯಾಂಗದ ಅಧಿಕಾರಗಳನ್ನು ತುಂಬಾ ಪ್ರತ್ಯೇಕವಾಗಿ ಚಿತ್ರಿಸಲಾಗಿದೆ.

ಪ್ರಧಾನಿ ಮೋದಿ ಅವರ ಸರ್ಕಾರ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ಅವರು New Parliament Building ಹೊಸ ಸಂಸತ್ತಿನ ಕಟ್ಟಡದ ಮೇಲೆ ರಾಷ್ಟ್ರೀಯ ಲಾಂಛನವನ್ನು ಅನಾವರಣ ಮಾಡಬಾರದು.
ಸಂಸತ್ ಭವನದ ಎಲ್ಲಾ ಅಧಿಕಾರಗಳೂ ಸ್ಪೀಕರ್‌ಗಳ ಅಧಿಕಾರದ ವ್ಯಾಪ್ತಿಗೆ ಬರುತ್ತದೆ. ದೇಶದ ಸಂಸತ್ ಸ್ಪೀಕರ್ ಯಾವುದೇ ಸರ್ಕಾರಕ್ಕಾಗಲಿ, ಪಕ್ಷಕ್ಕಾಗಲಿ ಅಧೀನರಲ್ಲ.
ಪ್ರಧಾನಿಯವರು ಎಲ್ಲಾ ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘೆನ ಮಾಡಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಮುಖ್ಯಸ್ಥರೇ ಹೊರತು ಲೋಕಸಭೆಯ ಮುಖ್ಯಸ್ಥರಲ್ಲ ಎಂದು ಬರೆದುಕೊಂಡಿದ್ದಾರೆ.