ನೀಟ್ ಮತ್ತು ಜೆಇಇ ಪರೀಕ್ಷೆಗಳ ಹೊಸ ಪರಿಷ್ಕೃತ ಪಟ್ಟಿ
ಹೊಸದಿಲ್ಲಿ, ಜುಲೈ 4: ಕೋವಿಡ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ನೀಟ್ ಮತ್ತು ಜೆಇಇ) ಅನ್ನು ಸೆಪ್ಟೆಂಬರ್ಗೆ ಮುಂದೂಡಿದೆ.
ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ನೀಟ್ ಮತ್ತು ಜೆಇಇ) ಅನ್ನು ಸೆಪ್ಟೆಂಬರ್ಗೆ ಮುಂದೂಡಲಾಗಿದೆ
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಡಾ.ರಮೇಶ್ ಪೋಖ್ರಿಯಾಲ್ ಅವರು ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು, ಜೆಇಇ ಮುಖ್ಯ ಪರೀಕ್ಷೆಯು ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯಲಿದ್ದು, ಜೆಇಇ-ಮುಖ್ಯ ಪರೀಕ್ಷೆಯು ಸೆಪ್ಟೆಂಬರ್ 1 ಮತ್ತು 6ರ ನಡುವೆ ನಡೆಯಲಿದೆ. ಜೆಇಇ-ಅಡ್ವಾನ್ಸ್ ಪರೀಕ್ಷೆಯು ಸೆಪ್ಟೆಂಬರ್ 27 ರಂದು ನಡೆಯಲಿದ್ದು ನೀಟ್ ಪರೀಕ್ಷೆ ಸೆಪ್ಟೆಂಬರ್ 13 ರಂದು ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಮೊದಲು ನೀಟ್ ಪರೀಕ್ಷೆ ಜುಲೈ 26 ಮತ್ತು ಜೆಇಇ ಪರೀಕ್ಷೆಗಳು ಜುಲೈ 18 ರಿಂದ 23 ರವರೆಗೆ ನಿಗದಿಯಾಗಿದ್ದವು.ನೀಟ್ ಪರೀಕ್ಷೆ ಜುಲೈ 26 ಹಾಗೂ ಜೆಇಇ ಪರೀಕ್ಷೆಗಳು ಜುಲೈ 18 ರಿಂದ 23 ರವರೆಗೆ ನಿಗದಿಯಾಗಿದ್ದವು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) ಪ್ರವೇಶಕ್ಕಾಗಿ ನಡೆಸಲಾಗುವ ಜೆಇಇ-ಅಡ್ವಾನ್ಸ್ಡ್ ಅನ್ನು ಆಗಸ್ಟ್ 23 ರಂದು ನಡೆಸಲು ನಿರ್ಧರಿಸಲಾಗಿತ್ತು. ಇದೀಗ ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜೆಇಇ ಮುಖ್ಯ ಪರೀಕ್ಷೆ ಹಾಗೂ ನೀಟ್ ಪರೀಕ್ಷೆಯನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.