ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಧರ್ಮಸ್ಥಳದಲ್ಲಿ ಸರತಿ ಸಾಲಿಗೆ ಹೊಸ ರೂಲ್ಸ್!

ಭಕ್ತರಿಗಾಗಿ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ

Author2 by Author2
January 7, 2025
in State, ರಾಜ್ಯ
Share on FacebookShare on TwitterShare on WhatsappShare on Telegram

ಮಂಗಳೂರು: ಪುಣ್ಯ ಕ್ಷೇತ್ರ ಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಗಂಟೆಗಟ್ಟಲೆ ಸರತಿ ಸಾಲಿನಲ್ಲೇ ನಿಲ್ಲಬೇಕಿತ್ತು. ವೀಕೆಂಡ್, ರಜಾ ದಿನ, ವಿಶೇಷ ಹಬ್ಬ ಬಂದರೆ ಸರತಿ ಸಾಲಿನಲ್ಲಿ ಹೆಚ್ಚಿನ ಜನ ಆಗಮಿಸುತ್ತಿದ್ದರು. ಹೀಗಾಗಿ ಭಕ್ತರ ಈ ಕಷ್ಟವನ್ನರಿತ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (Veerendra Heggade) ಇದಕ್ಕೊಂದು ಬದಲಿ ಆರಾಮದಾಯಕ ವ್ಯವಸ್ಥೆ ಮಾಡಿದ್ದಾರೆ.

ಪರಿಕಲ್ಪನೆಯ ಈ ವ್ಯವಸ್ಥೆ ರಾಜ್ಯದಲ್ಲೇ ಪ್ರಥಮ ಎನಿಸಿಕೊಂಡಿದ್ದು ಇಂದು ಲೋಕಾರ್ಪಣೆಗೊಳ್ಳಲಿದೆ. ತಿರುಪತಿ ಕ್ಷೇತ್ರಗಳಲ್ಲಿ ಕ್ಯೂ ಕಾಂಪ್ಲೆಕ್ಸ್ ಮೂಲಕ ನೀವು ತೆರಳಿ ದೇವರ ದರ್ಶನ ಪಡೆಯುವ ಮಾದರಿಯಲ್ಲೇ ಧರ್ಮಸ್ಥಳದಲ್ಲೂ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆ ಮಾಡಲಾಗಿದೆ.

Related posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

February 2, 2026
ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026

ಮಕ್ಕಳು, ಮಹಿಳೆಯರು, ವಯಸ್ಸಾದವರು ಸೇರಿದಂತೆ ಎಲ್ಲರೂ ಸರತಿ ಸಾಲಿನಲ್ಲಿ ನಿಂತುಕೊಂಡೇ ಸಾಗಬೇಕಾಗಿತ್ತು. ಹೀಗಾಗಿ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗಿದೆ. ದೇವಸ್ಥಾನದ (Manjunatha Swamy Temple) ಹಿಂಭಾಗದಲ್ಲಿ ಬರೋಬ್ಬರಿ 2,75,177 ಚದರ ಅಡಿ ವಿಸ್ತೀರ್ಣದ ಎರಡು ಅಂತಸ್ತಿನ ಕ್ಯೂ ಕಾಂಪ್ಲೆಕ್ಸ್ ತಲೆ ಎತ್ತಿದೆ.
ಸಾನ್ನಿಧ್ಯ ಹೆಸರಿನ ಈ ಕಾಂಪ್ಲೆಕ್ಸ್ ಬಹಳಷ್ಟು ವಿಶಿಷ್ಟತೆಯಿಂದ ಕೂಡಿದ್ದು, ಭಕ್ತರು ಸರತಿ ಸಾಲಿನಲ್ಲಿ ನಿಲ್ಲದೇ ವಿಶಾಲವಾದ ಭವನದಲ್ಲಿ ಕುರ್ಚಿಯಲ್ಲಿ ಕುಳಿತು ಕ್ರಮೇಣವಾಗಿ ಮುಂದಿನ ಭವನಗಳಿಗೆ ಸ್ಥಳಾಂತರಗೊಳ್ಳಬಹುದು. ಎರಡು ಅಂತಸ್ಥಿನಲ್ಲಿ ತಲಾ 8 ರಂತೆ 16 ವಿಶಾಲ ಭವನಗಳಿದ್ದು ಪ್ರತಿ ಭವನದಲ್ಲಿ 800 ಮಂದಿಯಂತೆ ಸುಮಾರು 12ಸಾವಿರ ಜನ ತಂಗಲು ಅವಕಾಶ ಕಲ್ಪಿಸಲಾಗಿದೆ.

ಇದು ಎಲ್ಲಾ ಸೌಲಭ್ಯಗಳನ್ನು ಹೊಂದಿದೆ. ಕ್ಯೂ ಕಾಂಪ್ಲೆಕ್ಸ್‌ ಪ್ರವೇಶಿಸುತ್ತಿದ್ದಂತೆ ಎ.ಐ ತಂತ್ರಜ್ಞಾನದ ಕ್ಯಾಮೆರಾ ಎಲ್ಲಾ ಭಕ್ತರ ಸಂಖ್ಯೆಗಳನ್ನು ಲೆಕ್ಕ ಹಾಕುತ್ತದೆ. ಆರಂಭದಲ್ಲೆ ಸೇವಾ ರಶೀದಿ ಕೌಂಟರ್ ಇದೆ. ಸ್ಟೇನ್ಲೆಸ್ ಸ್ಟೀಲ್ ಕುರ್ಚಿಗಳಿವೆ.
ಭಕ್ತಾಧಿಗಳಿಗೆ ಮಾರ್ಗದರ್ಶನ ನೀಡಲು ಎಲ್ಲೆಡೆ ಡಿಜಿಟಲ್ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದ್ದು, ಭವನ ಸಂಖ್ಯೆ, ದರ್ಶನದ ಅವಧಿ, ದೇವಸ್ಥಾನದ ಇತಿಹಾಸ ಪ್ರಸಾರವಾಗುತ್ತಿರುತ್ತದೆ. ಪ್ರತಿ ಭವನದಲ್ಲಿಯೂ ಕ್ಯಾಂಟೀನ್, ಶೌಚಗೃಹ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆರೈಕೆ ಕೊಠಡಿ ಕೂಡ ಇಲ್ಲಿದೆ.

ವಿಶಾಲವಾದ ಭವನದಲ್ಲಿ ಕುರ್ಚಿ ಮೇಲೆ ಕುಳಿತು ನಿಗದಿತ ಸಮಯದಲ್ಲಿ ದೇವರ ದರ್ಶನಕ್ಕೆ ತೆರಳಬಹುದು. ಇದರಿಂದಾಗಿ ಆರೇಳು ಗಂಟೆ ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಭಕ್ತರು ಈ ಮೂಲಕ ಒಂದೂವರೆ ಗಂಟೆಯೊಳಗೆ ದರ್ಶನ ಪಡೆಯಬಹುದು.

Tags: DharmasthalaManjunatha Swamy Templeveerendra heggade
ShareTweetSendShare
Join us on:

Related Posts

Vision of Vedanta in the eyes of science: 'Dakshinasya Darshini', which won the public's attention, has a big screen

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ

by admin
February 2, 2026
0

- ​ವಿಜ್ಞಾನ-ವೇದಾಂತದ ಸಂಗಮಕ್ಕೆ ಸಾಕ್ಷಿಯಾದ ಅರಮನೆ ಮೈದಾನ - ​ದಕ್ಷಿಣಾಸ್ಯ ದರ್ಶಿನಿ: ಕಣ್ಮನ ಸೆಳೆದ ದ್ವಾರಕಾ ದರ್ಶನ - ​ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ -...

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
February 2, 2026
0

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಈಗ ಭಾರತೀಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ...

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
February 2, 2026
0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರನ್ನು ಜಾಗತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram