ಸರ್ಕಾರಿ ಶಾಲೆಯಲ್ಲಿ ಹೊಸ ವರ್ಷದ ಎಣ್ಣೆ ಪಾರ್ಟಿ New Year Party saaksha tv
ರಾಯಚೂರು : ಸರ್ಕಾರಿ ಶಾಲೆಯಲ್ಲಿ ಹೊಸ ವರ್ಷದ ಎಣ್ಣೆ ಪಾರ್ಟಿ ಮಾಡಿರುವ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ರಬ್ಬಣಕಲ್ ಕ್ಯಾಂಪ್ ನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ಶಾಲೆಯ ಬೇಗ ಮುರಿದು, ಎಲ್ಲಾ ದಾಖಲಾತಿಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ.
ಅಲ್ಲದೇ ಅಡುಗೆ ಕೋಣೆಯಲ್ಲಿ ಮೊಟ್ಟೆ, ಹಾಲಿನಪುಡಿ, ಅಕ್ಕಿ, ಸಕ್ಕರೆ ಅಡುಗೆ ಬಳಸುವ ಎಣ್ಣೆ ಇನ್ನಿತರ ಎಲ್ಲಾ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.
ಇದಿಷ್ಟೆ ಅಲ್ಲದೇ ಶಾಲೆಯ ಆವರಣದಲ್ಲಿ ಮದ್ಯದ ಬಾಟಲ್ ಗಳು, ಮಾಂಸದ ತುಂಡುಗಳು ಬಿಸಾಡಿಸಿದ್ದಾರೆ.
ಇನ್ನು ಇಂದು ಬೆಳಿಗ್ಗೆ ಶಾಲೆಯ ಬೀಗ ತೆಗೆಯಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಶಾಲಾ ಶಿಕ್ಷಕರು ಮಾನ್ವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.