ಬೆಂಗಳೂರು ನಗರದಲ್ಲಿ ನಡೆಯುವ ಹೊಸ ವರ್ಷಾಚರಣೆಗೆ ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಸಮಯವನ್ನು ನಿಗದಿಪಡಿಸಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ, ನಮ್ಮ ಮೆಟ್ರೋ ಇಲಾಖೆಯೊಂದಿಗೆ ಸಭೆ ನಡೆಸಲಾಗಿದೆ. ಅತಿಹೆಚ್ಚು ಜನ ಸೇರುವ ಎಂ.ಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಮಹಿಳಾ ಭದ್ರತೆ, ವಾಚ್ ಟವರ್, ಶ್ವಾನ ದಳ ಸೇರಿದಂತೆ ಭದ್ರತೆಯ ದೃಷ್ಟಿಯಿಂದ ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಹ ತಿಳಿಸಿದರು.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








