ADVERTISEMENT
Monday, September 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನ್ಯೂಜಿಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ ಮುಗ್ಗರಿಸಿದ್ದು ಯಾಕೆ ?

admin by admin
March 3, 2020
in International, Newsbeat, Sports
Share on FacebookShare on TwitterShare on WhatsappShare on Telegram

ನ್ಯೂಜಿಲೆಂಡ್ ನೆಲದಲ್ಲಿ ಟೀಮ್ ಇಂಡಿಯಾದ ಘರ್ಜನೆ ಸ್ತಬ್ದಗೊಂಡಿದೆ. ಕೊಹ್ಲಿ ಪಡೆಯ ಗೆಲುವಿನ ಅಭಿಯಾನಕ್ಕೆ ವಿಲಿಯಮ್ಸನ್ ಪಡೆ ಬ್ರೇಕ್ ಹಾಕಿದೆ. ಆಕ್ರಮಣಕಾರಿ ಪ್ರವೃತ್ತಿಯ ನಾಯಕ ಕೊಹ್ಲಿಗೆ ಜೂನಿಯರ್ ಕೂಲ್ ಕ್ಯಾಪ್ಟನ್ ವಿಲಿಯಮ್ಸನ್ ಕೂಲ್ ಆಗಿಯೇ ಶಾಕ್ ನೀಡಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ತಂಡ ತನ್ನ ನೆಲದಲ್ಲಿ ಸೋಲಿಸುವುದು ಅಷ್ಟೊಂದು ಸುಲಭವಿಲ್ಲ ಎಂಬುದನ್ನು ಬಲಿಷ್ಠ ಟೀಮ್ ಇಂಡಿಯಾಗೆ ಮನವರಿಕೆ ಮಾಡಿಕೊಟ್ಟಿದೆ.

Related posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

September 21, 2026
ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

September 21, 2026

ಹೌದು, ನ್ಯೂಜಿಲೆಂಡ್ ತವರಿನಲ್ಲಿ ಸತತ ಆರು ಟೆಸ್ಟ್ ಸರಣಿಗಳನ್ನು ಗೆದ್ದುಕೊಂಡಿದೆ. ಕಳೆದ ಬಾರಿ ಪ್ರಬಲ ಇಂಗ್ಲೆಂಡ್ ತಂಡವನ್ನೇ ಮಣ್ಣು ಮುಕ್ಕಿಸಿರುವ ನ್ಯೂಜಿಲೆಂಡ್ ಈಗ ಟೀಮ್ ಇಂಡಿಯಾಗೂ ಸೋಲಿನ ಪಾಠ ಕಲಿಸಿದೆ. ಟಿ-ಟ್ವೆಂಟಿಯಲ್ಲಿ ಅಬ್ಬರಿಸಿದ್ದ ಟೀಮ್ ಇಂಡಿಯಾ ಏಕದಿನ ಮತ್ತು ಟೆಸ್ಟ್ ಸರಣಿಗಳಲ್ಲಿ ಯಾರೂ ಊಹಿಸದ ರೀತಿಯಲ್ಲಿ ಸೋಲು ಅನುಭವಿಸಿದೆ. ನ್ಯೂಜಿಲೆಂಡ್ ನೆಲದಲ್ಲಿ ಟೀಮ್ ಇಂಡಿಯಾದಿಂದ ಸಾಂಘಿಕ ಆಟ ಹೊರಬಂದಿಲ್ಲ. ಬ್ಯಾಟಿಂಗ್, ಬೌಲಿಂಗ್ ವಿಭಾಗಗಳಲ್ಲಿ ಯಾರು ಕೂಡ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡಿಲ್ಲ. ಹೀಗಾಗಿ ನಾಯಕ ಕೊಹ್ಲಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ. ಅಲ್ಲದೆ ಎಡವಿದ್ದು ಎಲ್ಲಿ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಅಂದ ಹಾಗೇ, ಪಂದ್ಯದಲ್ಲಿ ಸೋಲು ಗೆಲುವು ಇದ್ದದ್ದೇ. ಆದ್ರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸದಾ ಗೆಲುವಿನ ಹಸಿವಿನಲ್ಲೇ ಇರುವ ಕೊಹ್ಲಿ ಕೂಡ ನ್ಯೂಜಿಲೆಂಡ್ ನೆಲದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. ಸುನಾಮಿಯಂತೆ ರನ್ ಗಳಿಸುತ್ತ ಶತಕದ ಮೇಲೆ ಶತಕ ದಾಖಲಿಸುತ್ತಿದ್ದ ಕೊಹ್ಲಿ ಸರಿ ಸುಮಾರು ಆರು ವರ್ಷಗಳ ಬಳಿಕ ಈ ರೀತಿಯ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದಾರೆ. 2014ರ ಇಂಗ್ಲೆಂಡ್ ಸರಣಿಯಲ್ಲೂ ಕೊಹ್ಲಿ ಹೀನಾಯ ಪ್ರದರ್ಶನ ನೀಡಿದ್ದರು.

ಆದ್ರೆ ನ್ಯೂಜಿಲೆಂಡ್ ನೆಲದಲ್ಲಿ ಯಾವುದೇ ತಂಡವಾಗಿರಲಿ. ಅಲ್ಲಿ ಗೆಲುವು ಸಾಧಿಸುವುದು ಅಷ್ಟೊಂದು ಸುಲಭವಿಲ್ಲ. ಮುಖ್ಯವಾಗಿ ನ್ಯೂಜಿಲೆಂಡ್ ನೆಲದಲ್ಲಿ ಸಾಂಘಿಕ ಆಟವನ್ನು ಆಡಲೇಬೇಕು. ಅಲ್ಲಿನ ಪಿಚ್ ಅನ್ನು ಅರಿತುಕೊಂಡು ಬ್ಯಾಟಿಂಗ್ ಮಾಡಿದ್ರೆ ಮಾತ್ರ ಯಶ ಸಾಧಿಸಲು ಸಾಧ್ಯ. ಹಾಗೇ ತಂಡದ ಪ್ರಮುಖ ಆಟಗಾರರ ಜೊತೆ ಕೆಳ ಕ್ರಮಾಂಕದ ಆಟಗಾರರ ಬ್ಯಾಟ್ ನಲ್ಲಿ ರನ್ ಹರಿದುಬರಬೇಕು. ಅಲ್ಲದೆ 300ಕ್ಕೂ ಅಧಿಕ ರನ್ ಪೇರಿಸಿದ್ರೆ ಮಾತ್ರ ಪ್ರಬಲ ಪ್ರತಿಸ್ಪರ್ಧೆ ಒಡ್ಡಬಹುದು. ಗೆಲುವಿನ ಲೆಕ್ಕಚಾರವನ್ನು ಹಾಕಿಕೊಳ್ಳಬಹುದು.

ಇನ್ನು ಕಳೆದ ಹತ್ತು ವರ್ಷಗಳಲ್ಲಿ ನ್ಯೂಜಿಲೆಂಡ್ ತವರಿನಲ್ಲಿ ಬಲಿಷ್ಠ ತಂಡ ಎಂಬುದನ್ನು ಸಾಬಿತುಪಡಿಸಿದೆ. ಅದಕ್ಕೆ ಪೂರಕವಾದ ಅಂಕಿ ಅಂಶಗಳು ಇವೆ. ಹತ್ತು ವರ್ಷಗಳಲ್ಲಿ ನ್ಯೂಜಿಲೆಂಡ್ ತವರಿನಲ್ಲಿ 41 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದ್ರಲ್ಲಿ 21 ಪಂದ್ಯಗಳನ್ನು ಗೆದ್ದುಕೊಂಡ್ರೆ, ಸೋತಿರುವುದು ಕೇವಲ 7 ಪಂದ್ಯಗಳನ್ನು ಮಾತ್ರ. ಇನ್ನುಳಿದ 13 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.

ಆದ್ರೆ ಕಳೆದ ಹತ್ತು ವರ್ಷಗಳಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ನ್ಯೂಜಿಲೆಂಡ್ ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನು ನೀಡಿಲ್ಲ.. ಆಡಿರುವ 25 ಪಂದ್ಯಗಳಲ್ಲಿ ನ್ಯೂಜಿಲೆಂಡ್ ಹತ್ತು ಪಂದ್ಯಗಳನ್ನು ಗೆದ್ದುಕೊಂಡ್ರೆ, ಐದು ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದ 10 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

ಹಾಗೇ ಕಳೆದ ಐದು ಟೆಸ್ಟ್ ಸರಣಿಗಳಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಗೆದ್ದಿರುವುದು ಒಂದು ಬಾರಿ ಮಾತ್ರ. 1998-99ರಲ್ಲಿ ಭಾರತ 3 ಪಂದ್ಯಗಳ ಸರಣಿಯಲ್ಲಿ 0-1ರಿಂದ ಸೋತ್ರೆ, 2002-03ರಲ್ಲಿ ಎರಡು ಪಂದ್ಯಗಳ ಸರಣಿಯಲ್ಲಿ 0-2ರಿಂದ ಮುಖಭಂಗ ಅನುಭವಿಸಿದೆ. ಆದ್ರೆ 2008-09ರ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 1-0ಯಿಂದ ಗೆದ್ದುಕೊಂಡಿತ್ತು. ಇನ್ನು 2013-14ರ ಎರಡು ಪಂದ್ಯಗಳ ಸರಣಿಯನ್ನು 0-1ರಿಂದ ಸೋಲು ಅನುಭವಿಸಿತ್ತು. ಇದೀಗ 2020ರ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಪರಾಭವಗೊಂಡಿದೆ.

Tags: Bisi Bisi CrickettuCricketNew Zealand
ShareTweetSendShare
Join us on:

Related Posts

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು: ಅಂದು ಹಾಕಿದ ಅಡಿಪಾಯ ಇಂದು ಸಾಕಾರ, ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಹೆಮ್ಮೆ

by Shwetha
September 21, 2026
0

ಮಂಗಳೂರು: ಕರಾವಳಿ ಜನರ ದಶಕಗಳ ಕನಸು ಹಾಗೂ ತುಳುನಾಡಿನ ಅಸ್ಮಿತೆಯ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ರಾಜ್ಯ...

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

ನಿಯಮ ಮೀರಿ ಪ್ರತಿಮೆ ಸ್ಥಾಪಿಸಬೇಡಿ, ಅಭಿಮಾನಕ್ಕಿಂತ ನಿಯಮವೇ ಮೊದಲು: ರಾತ್ರೋರಾತ್ರಿ ಪ್ರತಿಮೆ ಸ್ಥಾಪನೆ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ ಎಂದ ಖರ್ಗೆ.

by Shwetha
September 21, 2026
0

ಕಲಬುರಗಿ: ಕಲಬುರಗಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ವೃತ್ತದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಸ್ಥಾಪನೆ ಮತ್ತು ಅದರ ಬೆನ್ನಲ್ಲೇ ನಡೆದ ತೆರವು ಕಾರ್ಯಾಚರಣೆ ಈಗ ರಾಜ್ಯ...

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

ಹೇ ಧನಂಜಯ ಬಾರೋ ಇಲ್ಲಿಗೆ ಅಂದಿದ್ದೇ ಮುಳುವಾಯ್ತು:ಪೊಲೀಸರ ವಿರುದ್ಧವೇ ತೊಡೆ ತಟ್ಟಿದ್ದ ಸಿಂಹಗೆ ಈಗ ಎಫ್‌ಐಆರ್ ಸಂಕಷ್ಟ-ನಾವು ಬಗ್ಗಲ್ಲ ಜಗ್ಗಲ್ಲ ಅಂದ್ರು ಆರ್ ಅಶೋಕ್

by Shwetha
September 21, 2026
0

ಮೈಸೂರು: ಟಿ ನರಸೀಪುರದಲ್ಲಿ ನಡೆದ ಗಣೇಶ ಶೋಭಾಯಾತ್ರೆ ವೇಳೆ ಪೊಲೀಸ್ ಅಧಿಕಾರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್...

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

ರೈತರ ಹಿತಕ್ಕಾಗಿ ಹಾಲಿನ ದರ ಏರಿಕೆ ಅನಿವಾರ್ಯ: ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ ಡಿ ಕೆ ಶಿವಕುಮಾರ್ ಸರ್ಕಾರ!

by Shwetha
September 21, 2026
0

ಬೆಂಗಳೂರು: ರಾಜ್ಯದ ಜನಸಾಮಾನ್ಯರ ಮೇಲೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಮುನ್ಸೂಚನೆ ಸಿಕ್ಕಿದೆ. ನಂದಿನಿ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಗಂಭೀರ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram