ದೆಹಲಿ – ಒಂದೇ ಆಸ್ಪತ್ರೆಯ 80 ಜನ ವೈದ್ಯರಿಗೆ ಕೊರೊನಾ ಪಾಸಿಟಿವ್ – ಒಬ್ಬರ ಸಾವು
ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಹಗಲು ರಾತ್ರಿ ಸೋಂಕಿತರ ಚಿಕಿತ್ಸೆಗಾಗಿ ಶ್ರಮ ಪಡುತ್ತಿರುವ ವೈದ್ಯರಿಗೂ ಸಂಕಷ್ಟ ಎದುರಾಗಿದೆ.. ಇದಕ್ಕೆ ಸಾಕ್ಷಿಯಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಸರೋಜ್ ಆಸ್ಪತ್ರೆಯಲ್ಲಿ 80 ಮಂದಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರೂ ರೋಗಿಗಳಿಗೆ ಆಸ್ಪತ್ರೆ ಚಿಕಿತ್ಸೆ ನೀಡುವುದನ್ನು ಮುಂದುವರೆಸಿದೆ. ಸುಮಾರು ಮೂರು ದಶಕಗಳ ಕಾಲ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ವೈದ್ಯರೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಆಸ್ಪತ್ರೆಯ ಹಿರಿಯ ಸರ್ಜನ್ ಡಾ.ಎ.ಕೆ ರಾವತ್ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕೋವಿಡ್-19 ರೋಗಕ್ಕೆ ಚಿಕಿತ್ಸೆ ನೀಡುತ್ತಿದ್ದ 80 ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದರಲ್ಲಿ 12 ಮಂದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಉಳಿದ ವೈದ್ಯರು ಹೋಂ ಐಸೋಲೇಶನ್‍ನಲ್ಲಿದ್ದಾರೆ. ದೆಹಲಿ ಆಸ್ಪತ್ರೆಗಳಲ್ಲಿ ಇಲ್ಲಿಯವರೆಗೂ 300ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸರೋಜ್ ಕೋವಿಡ್ ಆಸ್ಪತ್ರೆಯಲ್ಲಿ ಸದ್ಯ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿದೆ.








