ರಾಷ್ಟ್ರ ರಾಜದಾನಿಯಲ್ಲಿ ಬ್ಲಾಕ್ ಫಂಗಸ್ ಹಾವಳಿ – ಈವರೆಗೆ 1,044 ಮಂದಿಯಲ್ಲಿ ಕಾಣಿಸಿಕೊಂಡ ‘ಕಪ್ಪು ಶಿಲೀಂಧ್ರ’ – 89 ಸಾವು
ನವದೆಹಲಿ: ಕೋವಿಡ್ ಬೆನ್ನಲ್ಲೇ ದೇಶಾದ್ಯಂತ ಬ್ಲಾಕ್ ಫಂಗಸ್ ಕಾಟವೂ ಶುರುವಾಗಿದ್ದು, ಸುಮಾರು ಜನರು ಮೃತಪಟ್ಟಿದ್ದಾರೆ.. ಇನ್ನೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದರ ಕಾಟ ಸ್ವಲ್ಪ ಹೆಚ್ಚಾಗಿಯೇ ಇದ್ದು, ಇದುವರೆಗೆ ಕಪ್ಪು ಶಿಲೀಂಧ್ರ ಸೋಂಕು ದೃಢಪಟ್ಟ ಒಟ್ಟು 1,044 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 89 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 92 ಜನರು ಗುಣಮುಖರಾಗಿದ್ದು, ಉಳಿದಂತೆ 863 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗುರುವಾರ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.