ಕೃಷಿ ಕಾಯ್ದೆಗಳ ವಿರುದ್ಧ ರೈತರ ಹೋರಾಟಕ್ಕೆ 6 ತಿಂಗಳು – ಮೇ 26 ಅನ್ನು ‘ಕಪ್ಪು ದಿನ’ವಾಗಿ ಆಚರಣೆ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ರಾಷ್ಟ್ರ ರಾಜದಾನಿ ದೆಹಲಿಯಲ್ಲಿ ದೇಶಾದ್ಯಂತದ ರೈತರು ತಿಂಗಳುಗಳಿಂದ ಪ್ರತಿಭಟನೆ ನಡೆಸಿಕೊಂಡು ಬಂದಿದ್ಧಾರೆ. ದೆಹಲಿ ಗಡಿ ಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಮೇ 26ರಂದು ಆರು ತಿಂಗಳನ್ನು ಪೂರೈಸಲಿದೆ. ಹೀಗಾಗಿ ಈ ದಿನ ಅಂದ್ರೆ ಮೇ 26 ಅನ್ನು ಅಕಪ್ಪು ದಿನವನ್ನಾಗಿ ಆಚರಿಸಲು ರೈತರು ನಿರ್ಧರಿಸಿದ್ದಾರೆ. 40 ರೈತ ಸಂಘಟನೆಗಳನ್ನೊಳಗೊಂಡ ಸಂಯುಕ್ತ ಕಿಸಾನ್ ಮೋರ್ಚಾ ಈ ಬಗ್ಗೆ ತಿಳಿಸಿದೆ.
ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ನಾಯಕ ಬಲ್ಬೀರ್ ಸಿಂಗ್ ರಾಜೇವಾಲ್ ಅವರು, ಮೇ 26ರಂದು ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ ಮತ್ತು ವಾಹನಗಳಲ್ಲಿ ಕಪ್ಪು ಬಾವುಟ ಹಾರಿಸುವ ಮೂಲಕ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುವಂತೆ ಮನವಿ ಮಾಡಿದರು. ಮೇ 26ರಂದು ರೈತರ ಪ್ರತಿಭಟನೆಯು ಆರು ತಿಂಗಳು ಪೂರೈಸಲಿದೆ. ಅಲ್ಲದೆ ಇದೇ ದಿನದಂದು ಮೋದಿ ಸರ್ಕಾರವು ತನ್ನ ಏಳು ವರ್ಷಗಳನ್ನು ಕೂಡ ಪೂರ್ಣಗೊಳಿಸಲಿದೆ. ಈ ಕಪ್ಪು ದಿನ ದಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ದಹಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.