ರಾಷ್ಟ್ರ ರಾಜದಾನಿಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 1,200ಕ್ಕೂ ಹೆಚ್ಚು ಜನರಿಗೆ ದಂಡ..!
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರದಲ್ಲಿ 1,200ಕ್ಕೂ ಹೆಚ್ಚು ಜನರಿಗೆ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಸ್ಕ್ ಧರಿಸದ 1,068, ಅಂತರ ಕಾಪಾಡಿಕೊಳ್ಳದ 192 ಜನರಿಗೆ ದಂಡ ವಿಧಿಸಲಾಗಿದೆ ಎಂದು ದೆಹಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಅನಿಲ್ ಮಿತ್ತಲ್ ಅವರು ತಿಳಿಸಿದ್ದಾರೆ.
ಏಪ್ರಿಲ್ 19ರಿಂದ ಜೂನ್ 11ರವರೆಗೆ 1,29,590 ಚಲನ್ಗಳನ್ನು ಪೊಲೀಸರು ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಾಸ್ಕ್ ಧರಿಸದವರಿಗೆ 1,09,075 ಚಲನ್ಗಳನ್ನು ನೀಡಲಾಗಿದೆ, ಅಂತರ ಕಾಪಾಡಿಕೊಳ್ಳದ 18,790, ಸಾರ್ವಜನಿಕ ಸಭೆ ನಡೆಸಿದ 1,532, ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡಿದ 121 ಮಂದಿಗೆ ಇದುವರೆಗೆ ದಂಡ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.