Shivamogga – ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ
ಶಿವಮೊಗ್ಗ : ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ಅಶ್ವಥ್ ನಗರದಲ್ಲಿ ನಡೆದಿದೆ.
ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿಕೊಂಡವರಾಗಿದ್ದಾರೆ. ಇವರು ಐದು ತಿಂಗಳ ಹಿಂದೆ ಆಕಾಶ ಎಂಬ ಯುವಕನನ್ನು ಮದುವೆಯಾಗಿದ್ದಳು.
ಆದ್ರೆ ನಿನ್ನೆ ಕಾರಿನ ಶೆಡ್ ನಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಘಟನೆ ಬಗ್ಗೆ ವಿನೋಬನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಳಿಕ ನವ್ಯಶ್ರೀಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೇ ಪ್ರಕರಣ ದಾಖಲಿಸಿಕೊಂಡಿದ್ದಾರೆ.