ಆಷಾಢ ಮಾಸದ ಮೂರನೇ ಶುಕ್ರವಾರದ ಹಿನ್ನೆಲೆಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಿದ್ದು, ಆಷಾಢ ಮಾಸದ ಮೂರನೇ ವಾರವೂ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ಹೀಗಾಗಿ ದರ್ಶನಕ್ಕೆ ಬರುವ ಭಕ್ತರಿಗೆ 300 ರೂ. ಹಾಗೂ 50 ರೂ. ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಸೋಮವಾರದಂದು ಚಾಮುಂಡೇಶ್ವರಿ ಅಮ್ಮನವರ ವರ್ದಂತಿ ಇದೆ ಎಂದು ಅರ್ಚಕರು ಮಾಹಿತಿ ನೀಡಿದ್ದಾರೆ.






