ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

Newz v Ind ODI Series : ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಸೋಲು

Namratha Rao by Namratha Rao
November 25, 2022
in ಕ್ರಿಕೆಟ್, News, Newsbeat, Sports
team india
Share on FacebookShare on TwitterShare on WhatsappShare on Telegram

Newz v Ind ODI Series : ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಸೋಲು

ಮಧ್ಯಮ ಕ್ರಮಾಂಕದ ಆಟಗಾರ ಟಾಮ್ ಲೇಥಮ್(145*) ಹಾಗೂ ನಾಯಕ ಕೇನ್‌ ವಿಲಿಯಮ್ಸನ್(94*) ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ‌ ಭಾರತದ ವಿರುದ್ಧದ‌ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿ಼ಲೆಂಡ್ ‌7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳ ODI ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಆಕ್ಲೆಂಡ್‌ನ ಸೆಡನ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿ಼ಲೆಂಡ್ ಬೌಲಿಂಗ್ ಆಯ್ಕೆ‌ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ‌306 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತು. ಆದರೆ ಟಾರ್ಗೆಟ್ ಬೆನ್ನತ್ತಿದ ನ್ಯೂಜಿ಼ಲೆಂಡ್ 47.1 ಓವರ್‌ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ ‌309 ರನ್‌ಗಳಿಸುವ ಮೂಲಕ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಕಿವೀಸ್ ಪರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ‌ ವಿಕೆಟ್ ಕೀಪರ್ ಟಾಮ್ ಲೇಥಮ್(145*) ಹಾಗೂ ನಾಯಕ ಕೇನ್ ವಿಲಿಯಮ್ಸನ್ (94*) ತಂಡದ ಗೆಲುವಿನ ಹೀರೋಗಳಾಗಿ ಮಿಂಚಿದರು.

ಕೇನ್-ಲೇಥಮ್ ಜುಗಲ್ ಬಂದಿ
ಭಾರತ ನೀಡಿದ 307 ರನ್‌ಗಳ ಸವಾಲು ಬೆನ್ನತ್ತಿದ ನ್ಯೂಜಿ಼ಲೆಂಡ್ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಫಿನ್ ಅಲೆನ್(22), ಡೆವೊನ್ ಕಾನ್ವೇ(24) ಹಾಗೂ ನಂತರದಲ್ಲಿ ಬಂದ ಡ್ಯಾರಿಲ್ ಮಿಚೆಲ್(11) ನಿರೀಕ್ಷಿತ ಆಟವಾಡಲಿಲ್ಲ. ಆದರೆ ನಂತರ ಜೊತೆಯಾದ ಕೇನ್ ವಿಲಿಯಮ್ದನ್(94* ರನ್‌ಗಳು, 98 ಬಾಲ್ಸ್, 7 ಬೌಂಡರಿ ಹಾಗೂ 1 ಸಿಕ್ಸ್) ಹಾಗೂ ಟಾಮ್‌ ಲೇಥಮ್ (145* ರನ್‌ಗಳು, 104 ಬಾಲ್ಸ್, 19 ಬೌಂಡರಿ ಹಾಗೂ 5 ಸಿಕ್ಸ್) ಟೀಂ ಇಂಡಿಯಾ ಬೌಲರ್‌ಗಳ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಿದರು. ಹಂತ ಹಂತವಾಗಿ ಇನ್ನಿಂಗ್ಸ್ ಕಟ್ಟಿದ ಈ ಇಬ್ಬರು 4ನೇ ವಿಕೆಟ್‌ಗೆ ಅಜೇಯ 221* ರನ್‌ಗಳ ಜೊತೆಯಾಟವಾಡಿ ಮಿಂಚಿದರು. ಭಾರತದ ಪರ‌ ಉಮ್ರಾನ್ ಮಲ್ಲಿಕ್ 2 ವಿಕೆಟ್ ಪಡೆದರೆ, ಶಾರ್ದೂಲ್ ಥಾಕೂರ್ 1 ವಿಕೆಟ್ ಪಡೆದರು.

ಭಾರತದ ಪೈಪೋಟಿಯ ಮೊತ್ತ
ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 306 ರನ್‌ಗಳಿಸಿತು. ಭಾರತದ ಪರ‌ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶಿಖರ್ ಧವನ್(72) ಹಾಗೂ ಶುಭ್ಮನ್ ಗಿಲ್(51) ಮೊದಲ ವಿಕೆಟ್‌ಗೆ 124 ರನ್‌ಗಳಿಸಿದರು. ಆದರೆ ನಂತರದಲ್ಲಿ ಕಣಕ್ಕಿಳಿದ ರಿಷಬ್ ಪಂತ್(15) ಹಾಗೂ ಸೂರ್ಯಕುಮಾರ್ ಯಾದವ್(4) ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ 1ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್(80) ಜವಾಬ್ದಾರಿಯ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರೆ. ಮಧ್ಯಮ ಕ್ರಮಾಂಕದಲ್ಲಿ ಸಂಜೂ ಸ್ಯಾಮ್ಸನ್(36) ಹಾಗೂ ವಾಷಿಂಗ್ಟನ್ ಸುಂದರ್(37*) ಬಿರುಸಿನ ಆಟವಾಡಿ ತಂಡದ ಮೊತ್ತ 306 ರನ್‌ಗಳಿಗೆ ಹೆಚ್ಚಿಸಿದರು. ಕಿವೀಸ್ ಪರ ಉತ್ತಮ ಫೆರ್ಗುಸನ್ 3/59 ಹಾಗೂ ಟಿಮ್ ಸೌಥಿ 3/73 ಉತ್ತಮ ಬೌಲಿಂಗ್ ದಾಳಿ ನಡೆಸಿದರು.

ಇಂದಿನ ಪಂದ್ಯದಲ್ಲಿ ಭಾರತದ ಪರ ಅರ್ಶದೀಪ್‌ ಸಿಂಗ್ ಹಾಗೂ ಉಮ್ರಾನ್ ಮಲ್ಲಿಕ್ ODI ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ನ.27ರಂದು ಹ್ಯಾಮಿಲ್ಟನ್ ನಲ್ಲಿ ನಡೆಯಲಿದೆ.

Tags: #saakshatvcinibazaarNewz v Ind ODI Series
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram