ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಲ್ಲಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಶಂಕಿತ ಉಗ್ರನನ್ನು ಎನ್‌ಐಎ (NIA) ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಶಂಕಿತ ಉಗ್ರ ಬೆಂಗಳೂರು ವಿಮಾನ ನಿಲ್ದಾಣದಿಂದ ಸೌದಿಯ ಜಿದ್ದಾಗೆ ಹೋಗಲು ಸಿದ್ಧತೆ ನಡೆಸಿದ್ದ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.
ಇಮಿಗ್ರೇಷನ್ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಎನ್‌ಐಎ ಅಧಿಕಾರಿಗಳು ಶಂಕಿತನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಹಿಜ್ಬ್-ಉತ್-ತಹ್ರೀರ್ ಪ್ರಕರಣದ ಆರೋಪಿ ಎಂದು ಶಂಕಿಸಲಾಗಿದೆ.








