ದಾವೂದ್ ಇಬ್ರಾಹಿಂ ಛೋಟಾ ಶಕೀಲ್ ಆಪ್ತರನ್ನ ಬಂಧಿಸಿದ NIA
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆಪ್ತ ಶಕೀಲ್ ಶೇಖ್ ಅಲಿಯಾಸ್ ಛೋಟಾ ಶಕೀಲ್ನ ಇಬ್ಬರು ಸಹಚರರನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು ಆರಿಫ್ ಅಬೂಬಕರ್ ಶೇಖ್ ಮತ್ತು ಶಬ್ಬೀರ್ ಅಬೂಬಕರ್ ಶೇಖ್ ಎಂದು ಗುರುತಿಸಲಾಗಿದೆ.
ಇಬ್ಬರೂ ಮುಂಬೈನ ಪಶ್ಚಿಮ ಉಪನಗರಗಳಿಂದ ಡಿ-ಕಂಪನಿಯ ಸಿಂಡಿಕೇಟ್ ಅನ್ನು ನಡೆಸುತ್ತಿದ್ದರು ಮತ್ತು ಅಕ್ರಮ ಚಟುವಟಿಕೆಗಳು ಮತ್ತು ಭಯೋತ್ಪಾದಕ ನಿಧಿಯಲ್ಲಿ ತೊಡಗಿದ್ದರು ಎಂದು ಎನ್ಐಎ ಅಧಿಕಾರಿ ತಿಳಿಸಿದ್ದಾರೆ. ಇಬ್ಬರನ್ನೂ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಅಲ್ಲಿ ಸಂಸ್ಥೆಯು ಅವರ ಕಸ್ಟಡಿಯಲ್ ರಿಮಾಂಡ್ ಕೋರಲಿದೆ.
ಪಾಕಿಸ್ತಾನದಿಂದ ಅಂತಾರಾಷ್ಟ್ರೀಯ ಕ್ರಿಮಿನಲ್ ಸಿಂಡಿಕೇಟ್ ನಡೆಸುತ್ತಿರುವ ಛೋಟಾ ಶಕೀಲ್ ವಿರುದ್ಧ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿತ್ತು. ಆತ ಸುಲಿಗೆ, ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.
ಈ ವರ್ಷದ ಆರಂಭದಲ್ಲಿ ಫೆಬ್ರವರಿ 3 ರಂದು ಎನ್ಐಎ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಮುಂಬೈ ಮತ್ತು ಅದರ ಪಕ್ಕದ ಜಿಲ್ಲೆಗಳಲ್ಲಿ 29 ಸ್ಥಳಗಳಲ್ಲಿ ದಾಳಿ ನಡೆಸಿತ್ತು..