NIA | ಬೆಂಗಳೂರಿನಲ್ಲೂ ಎನ್ಐಎ ದಾಳಿ
ಬೆಂಗಳೂರು : ದೇಶದಾದ್ಯಂತ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ.
ಅದರಂತೆ ಬೆಂಗಳೂರಿನ ಅಪಾರ್ಟ್ ಮೆಂಟ್ ಒಂದರ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಿಚ್ ಮಂಡ್ ಟೌನ್ ನಲ್ಲಿರುವ ಪಿಎಫ್ಐ ನ ನ್ಯಾಷನಲ್ ಸೆಕ್ರೆಟರಿ ಮೊಹಮ್ಮದ್ ಸಾಕಿಬ್ ನಿವಾಸದ ಮೇಲೆ ದಾಳಿ ನಡೆಸಿದೆ.
ಇದನ್ನ ಖಂಡಿಸಿ ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದಾರೆ.
ಇದರಿಂದ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಹಮ್ಮಿಕೊಳ್ಳಲಾಗಿದೆ.