NIA | ಮಂಗಳೂರಿನ PFI, SDPI ಕಚೇರಿ ಮೇಲೆ NIA ದಾಳಿ
ಮಂಗಳೂರು : ನಗರದಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಚೇರಿ ಮತ್ತು ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ.
ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ಇರುವ ಕಚೇರಿ ಮೇಲೆ ಜಾವ ಸುಮಾರು 3 : 30ರ ವೇಳೆಗೆ ದಾಳಿ ಮಾಡಲಾಗಿದೆ.
ಇತ್ತ ಎನ್ ಐಎ ದಾಳಿ ಖಂಡಿಸಿ ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದ್ದಾರೆ.
ಈ ಹಿನ್ನಲೆಯಲ್ಲಿ ನೆಲ್ಲಿಕಾಯಿ ರಸ್ತೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಅರೆಮೀಸಲು ಪಡೆಯಿಂದ ಭಾರಿ ಕಟ್ಟೆಚ್ಚರ ವಹಿಸಲಾಗಿದೆ.