NIACL Apprentice Recruitment 2025 : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 500 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಿತಿ : ದಿನಾಂಕ 01 ಜೂನ್ 2025ಕ್ಕೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು.
ಸ್ಟೈಫಂಡ್ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 9,000 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 06, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 20, 2025








