`ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ’ ಬಗ್ಗೆ ಆರ್. ಅಶೋಕ್ ಸ್ಪಷ್ಟನೆ night curfew Saaksha tv
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಜೊತೆಗೆ ಓಮಿಕ್ರಾನ್ ಸೋಂಕು ಹೆಚ್ಚಳವಾಗುತ್ತಿದ್ದು, ಮತ್ತೆ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂಬ ಮಾತುಗಳ ಕೇಳಿಬರುತ್ತಿವೆ.
ಅದರಲ್ಲೂ ಮುಂದೆ ಕ್ರಿಸ್ ಮಸ್ ಹಾಗೂ ನ್ಯೂ ಇಯರ್ ಬರಲಿದ್ದು, ಜನರು ಗುಂಪು ಗುಂಪಾಗಿ ಸೇರುವುದು ಹೆಚ್ಚಾಗುತ್ತದೆ.
ಹೀಗಾಗಿ ಸೋಂಕು ತಡೆಗೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಲಿದೆ ಎಂದು ಹೇಳಲಾಗುತ್ತಿದೆ.
ಇದೀಗ ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟನೆ ನೀಡಿದ್ದ, ಆ ಬಗ್ಗೆ ಚಿಂತನೆ ನಡೆಸಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದರ ಬಗ್ಗೆ ಚಿಂತನೆ ನಡೆಸಿಲ್ಲ.
ಬದಲಿಗೆ ಹೊಸ ವರ್ಷ ಆಚರಣೆ ಮತ್ತು ಕ್ರಿಸ್ ಮಸ್ ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗುವುದು ಎಂದಿದ್ದಾರೆ.
ಹೊಸ ಮಾರ್ಗಸೂಚಿ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗುವುದು.
ಓಮಿಕ್ರಾನ್ ನಿಂದ ಹೊಸ ವರ್ಷ, ಕ್ರಿಸ್ ಮಸ್ ಗೆ ನಿರ್ಬಂಧ ಅಗತ್ಯವಿದೆ.
ತಜ್ಞರ ಸಲಹೆ ಪಡೆದು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.









