ರಾಜ್ಯದಲ್ಲಿ ಇಂದಿನಿಂದ ರಾತ್ರಿ 9 ರಿಂದ ನೈಟ್ ಕರ್ಫ್ಯೂ..!
ಬೆಂಗಳೂರು : ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕಿನ ಆರ್ಭಟಕ್ಕೆ ಕಡಿವಾಣ ಹಾಕಲು ಇಂದಿನಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಗಡಿ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.
ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕಪ್ರ್ಯೂವನ್ನು ವೀಕ್ ಎಂಡ್ ಕರ್ಫ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.