ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ Night curfew saaksha tv
ನವದೆಹಲಿ : ಹೆಮ್ಮಾರಿ ಕೊರೊನಾ ಸೋಂಕು ಹಾಗೂ ಮಾಯಾವಿ ಓಮಿಕ್ರಾನ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಪ್ರತಿ ನಿತ್ಯ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದಿನಿಂದ ನೈಟ್ ಕರ್ಫ್ಯೂ ಜಾರಿ ಮಾಡಿದ್ದಾರೆ.
ಇಂದು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.