ನಾಳೆಯಿಂದ ನೈಟ್ ಕರ್ಫ್ಯೂ : ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು : ಕೊರೊನಾಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಾಳೆಯಿಂದ ನೈಟ್ ಕಫ್ರ್ಯೂ ಜಾರಿಗೊಳಸಿದೆ. ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕಫ್ರ್ಯೂ ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತಿದೆ.
ನೈಟ್ ಕಫ್ರ್ಯೂ ಕುರಿತು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ.
ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕಾರ್ಖಾನೆಗಳು, ಕಂಪನಿಗಳು ಯಥಾರೀತಿ ಕಾರ್ಯ ನಿರ್ವಹಿಸಲಿವೆ.
ಆದರೆ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಅಥವಾ ನೌಕರರು ಕೊರೋನಾ ಕಫ್ರ್ಯೂ ಅವಧಿಗೂ ಮುನ್ನವೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿ ನೀಡಿಲಾಗಿದೆ. ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.
ಅತ್ಯವಶ್ಯಕ ಸೇವೆಗಳನ್ನ ಒದಗಿಸುವಂತಹ ವಾಹನಗಳು / ಸರಕು ಸಾಗಾಣಿಕೆ ವಾಹಣಗಳು/ ಹೋಂ ಡಿಲಿವರಿ / ಇ ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದದ ಮನೆಗೆ ಅಧಿಕೃತ ಟಿಕೆಟ್ ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ.