ನೈಟ್ ಕಪ್ರ್ಯೂ ಏನ್ ಇರುತ್ತೆ.. ಏನ್ ಇರಲ್ಲ..?
ಬೆಂಗಳೂರು : ಕೊರೊನಾ ವೈರಸ್ ರೂಪಾಂತರಗೊಂಡಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ, ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕಪ್ರ್ಯೂ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಸ್ವತಃ ಸಿಎಂ ಬಿ ಎಸ್ ಯಡಿಯೂರಪ್ಪನವರೇ ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕಪ್ರ್ಯೂ ಜಾರಿಗೊಳಿಸಲಾಗುತ್ತಿದೆ.
ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕಪ್ರ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
ಇದೇ ವೇಳೆ ಯುಕೆಯಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಅಂತಾ ತಿಳಿಸಿದರು.
ಇನ್ನು ನೈಟ್ ಕಪ್ರ್ಯೂನಲ್ಲಿ ಏನ್ ಇರಲಿದೆ ಅಂತಾ ನೋಡೋದಾದ್ರೆ
ತುರ್ತು ಸೇವೆಗಳಾದಂತ ಆಸ್ಪತ್ರೆ, ವೈದ್ಯಕೀಯ ಸೇವೆ, ಮೆಡಿಕಲ್ ಶಾಪ್ ಸೇರಿದಂತೆ ಇತರೆ ವ್ಯವಸ್ಥೆಗೆ ಮಾತ್ರ ರಾತ್ರಿ 10ರ ನಂತ್ರ ಬೆಳಿಗ್ಗೆ 6 ಗಂಟೆಯವರೆಗೆ ಅನುಮತಿ ನೀಡಲಾಗುತ್ತದೆ.
ಏನ್ ಇರೋದಿಲ್ಲ.?
ಪಬ್, ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, ಸಾರಿಗೆ ಸಂಚಾರ ವ್ಯವಸ್ಥೆ ಸೇರಿದಂತೆ ಎಲ್ಲವೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂದ್ ಆಗಲಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









