ನೈಟ್ ಕರ್ಫ್ಯೂ- ರಾಜ್ಯ ಸರ್ಕಾರದ ಇಬ್ಬಗೆ ನೀತಿ ವಿರುದ್ಧ ಕುಮಾರಸ್ವಾಮಿ ಆಕ್ರೋಶ….
ರಾಜ್ಯದಲ್ಲಿ ಒಮಿಕ್ರಾನ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ವಿಚಾರವಾಗಿ ಪ್ರತಿಕ್ರಿಯೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇದರಿಂದ ಯಾವುದೇ ಪ್ರಯೋಜನ ಇಲ್ಲ, ಫೆಬ್ರವರಿಯಲ್ಲಿ ಕೊರೊನಾ ವೈರಸ್ ಹೆಚ್ಚಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಳೆದ 2 ವರ್ಷದಿಂದ ವ್ಯಾಪಾರಸ್ಥರು ಪೆಟ್ಟು ತಿಂದಿದ್ದಾರೆ ಈ ರೀತಿಯಿಂದ ಅವರ ಹೊಟ್ಟೆಗೆ ಹೊಡೆದಂತಾಗುತ್ತದೆ.
ರಾಜ್ಯ ಸರ್ಕಾರ ಇಬ್ಬಗೆಯ ನೀತಿ ಹೊಂದಿದೆ. ರಾಜಕೀಯ ಸಭೆಗಳಿಗೆ ನಿರ್ಬಂಧವನ್ನ ವಿಧಿಸಿಲ್ಲ. ರಾಜಕೀಯ ಸಭೆಗೆ ಎಷ್ಟು ಜನ ಬೇಕಾದರೂ ಸೇರಬಹುದಾದರೆ ಬೇರೆ ಕಾರ್ಯಕ್ರಮಗಳಿಗೆ ನಿರ್ಬಂಧವೇಕೆ ? ರಾಜ್ಯ ಸರ್ಕಾರದ ಇಬ್ಬಗೆ ನೀತಿ ಹೊಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಮುಂದುವರೆದು ಮಾತನಾಡಿ, ಹಿಂದಿ ಹೇರಿಕೆ ವಿಚಾರವಾಗಿ ಹೆಚ್ಡಿಕೆ ಪ್ರತಿಕ್ರಿಯಿಸಿದರು
ಪದೇ ಪದೆ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ, ಕೇಂದ್ರ ಸರ್ಕಾರದ ನಿಲುವು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮನೋಭಾವದ ಬಗ್ಗೆ ಮೊದಲಿನಿಂದಲೂ ವಿರೋಧಿಸಿದ್ದೇನೆ, ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸುವ ಹುನ್ನಾರ ನಡೆಯುತ್ತಿದೆ, ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು, ರಾಜ್ಯದ ಜನರು ಸಹ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಬೇಕಿದೆ.
ಕನ್ನಡ ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದು ಹೆಚ್ಚುತ್ತಿದೆ. ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರದ ನಿಲುವು ಖಂಡಿಸುತ್ತೇನೆ, ಕನ್ನಡ ಭಾಷೆಯ ಮೇಲೆ ಅವಮಾನ ಮಾಡಬೇಡಿ, ಕನ್ನಡಿಗರ ಸ್ವಾಭಿಮಾನವನ್ನ ಕೆಣಕಬೇಡಿ ಕೇಂದ್ರ ಸರ್ಕಾರದ ಕನ್ನಡದ ತತ್ಸಾರ ಮನೋಭಾವ ವಿರುದ್ಧ ಮಾಜಿ ಸಿಎಂ ಕಿಡಿಕಾರಿದರು.








