ಕರ್ನಾಟಕದಲ್ಲಿ ನಾಳೆಯಿಂದ ಹೊಸ ರೂಲ್ಸ್ – ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಕ್ರಮ

1 min read
Night curfew weekend curfew imposed in Karnataka

ಕರ್ನಾಟಕದಲ್ಲಿ ನಾಳೆಯಿಂದ ಹೊಸ ರೂಲ್ಸ್ – ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಸೇರಿದಂತೆ ಕಠಿಣ ಕ್ರಮ

ಕರ್ನಾಟಕದಲ್ಲಿ ಮಂಗಳವಾರ 15 ಸಾವಿರಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ಮತ್ತು ಬೆಂಗಳೂರಿನಲ್ಲಿ ಸುಮಾರು 10,000 ಪ್ರಕರಣಗಳನ್ನು ದಾಖಲಿಸಿದ್ದು, ಆತಂಕದ ಸನ್ನಿವೇಶ ಮುಂದುವರಿದಿದೆ.

ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಸಿಎಂ ಬಿಎಸ್ ವೈ ಯಡಿಯೂರಪ್ಪ ಸೇರಿದಂತೆ ಸರ್ವ ಪಕ್ಷದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಎಲ್ಲಾ ಸಲಹೆಗಳನ್ನು ಕ್ರೋಢಿಕರಿಸಿ ಇದೀಗ ಕರ್ನಾಟಕ ರಾಜ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.
Night curfew weekend curfew imposed in Karnataka

ಏಪ್ರಿಲ್ 21 ರಿಂದ ಜಾರಿಗೆ ಬರುವಂತೆ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ನಾಳೆಯಿಂದ 14ದಿನದವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಏಪ್ರಿಲ್ 21 ರಿಂದ ಮೇ 4 ರ ತನಕ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದ್ದು, ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆ ವರೆಗೆ ವೀಕೆಂಡ್ ಕರ್ಪ್ಯೂ ಹೇರಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಕಾರ್ಯದರ್ಶಿ ಮಾಧ್ಯಮಕ್ಕೆ ಹೊಸ ಮಾರ್ಗಸೂಚಿ ಕುರಿತು ವಿವರಣೆ ನೀಡಿದ್ದಾರೆ.

ಯಾವುದೆಲ್ಲಾ ಇಲ್ಲ:

ಸಿನಿಮಾ ಹಾಲ್, ಸ್ವಿಮ್ಮಿಂಗ್ ಫೂಲ್, ಮಾರ್ಕೆಟ್,
ಶಾಲೆ-ಕಾಲೇಜು ಬಂದ್
ದೇವಸ್ಥಾನ, ಚರ್ಚ್ , ಮಸೀದಿ ಸೇರಿದಂತೆ ರಾಜ್ಯಾಧ್ಯಂತ ಧಾರ್ಮಿಕ ಕ್ಷೇತ್ರಗಳು ಬಂದ್
ಕ್ರೀಡಾಂಗಣ, ಪಾರ್ಕ್ ಶಾಪಿಂಗ್ ಮಾಲ್ ಬಂದ್
Night curfew weekend curfew imposed in Karnataka

ಯಾವುದಕ್ಕೆ ಅವಕಾಶ

ರೆಸ್ಟೋರೆಂಟ್, ವೈನ್ ಸ್ಟೋರ್ ‌ನಲ್ಲಿ ಪಾರ್ಸೆಲ್ ಗೆ ಮಾತ್ರ ಅನುಮತಿ
ಐಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್

ಲಸಿಕೆ ಹಾಕಿಸಿಕೊಳ್ಳುವವರಿಗೆ ಮನೆಯಿಂದ ಹೊರಬರಲು ಅವಕಾಶ

ಅಗತ್ಯ ವಸ್ತು ಖರೀದಿಗೆ ಅವಕಾಶ

ರಾತ್ರಿ ಪಾಳಿಯಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡೋದಕ್ಕೆ ಅವಕಾಶ

ಅಂತಾರಾರಾಜ್ಯ ಸಂಚಾರಕ್ಕೆ ಅವಕಾಶ

ದೂರ ಪ್ರಯಾಣಕ್ಕೆ ರಾತ್ರಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ

ಮದುವೆಗೆ 50 ಜನರಿಗೆ, ಅಂತ್ಯಕ್ರಿಯೆಗೆ 20 ಜನರಿಗೆ ಮಾತ್ರ ಅವಕಾಶ

ಇ ಕಾಮರ್ಸ್ ಚಟುವಟಿಕೆಗೆ ಅವಕಾಶ

ಸರ್ಕಾರಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಕೆಲಸ ಮಾಡಲು ಅವಕಾಶ

ಸಲೂನ್, ಬ್ಯೂಟಿ ಪಾರ್ಲರ್ ಗೆ ಅವಕಾಶ.

#Nightcurfew #weekendcurfew

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd