ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ. ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಲಾಕ್ ಡೌನ್ ಜೊತೆ ನೈಟ್ ಕರ್ಫ್ಯೂ ಘೋಷಿಸಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವೀಕೆಂಡ್ ಲಾಕ್ ಡೌನ್ ಇರಲಿದೆ. ವೀಕೆಂಡ್ ಲಾಕ್ ದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಹಣ್ಣು, ತರಕಾರಿ, ದಿನಸಿ ಖರೀದಿ ಅವಕಾಶ ನೀಡಲಾಗಿದೆ.
ಇನ್ನೂ ಮಾರ್ಗಸೂಚಿಯ ಅವಧಿ ಜಾರಿಯಲ್ಲಿರುವವರೆಗೂ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನ ಪಾಲಿಸಲೇಬೇಕಾಗಿದೆ. 5ಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ. ರಾತ್ರಿ 10 ಗಂಟೆ ಬದಲಾಗಿ 9 ಗಂಟೆಗೆ ಕೊರೊನಾ ಕರ್ಫ್ಯೂ ಜಾರಿಗೆ. ನೈಟ್ ಕರ್ಪ್ಯೂ ಬೆಳಗ್ಗೆ 6ರವರೆಗೂ ಮುಂದುವರಿಯಲಿದೆ. ಸಿನಿಮಾ, ಶಾಲೆ, ಥಿಯೇಟರ್ ಬಂದ್, ಸಲೂನ್, ಬ್ಯೂಟಿ ಪಾರ್ಲರ್ ಗಳಿಗೆ ಅವಕಾಶ ಎಲ್ಲ ಶಿಕ್ಷಣ ಸಂಸ್ಥೆಗಳು ಬಂದ್ ಆಗಲಿವೆ. ಕ್ರೀಡಾ ಸಂಕೀರ್ಣ, ಪಾರ್ಕ್, ಸ್ವಿಮ್ಮಿಂಗ್ ಪೂಲ್ ಸೇರಿ ಎಲ್ಲಾ ಬಂದ್ ಆಗಲಿವೆ. ಸಿನಿಮಾ ಹಾಲ್, ಸ್ವಿಮ್ಮಿಂಗ್ ಪೂಲ್, ಬಾರ್ ರೆಸ್ಟೋರೆಂಟ್ ಬಂದ್ ಮಾಡಲಾಗಿದೆ.
ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದಿನ ಮೇ 4 ರವರೆಗೆ ನೈಟ್ ಕರ್ಫ್ಯೂ ಘೋಷಣೆ ಮಾಡಿದೆ.
ಇಡೀ ಕರ್ನಾಟಕದಲ್ಲಿ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಚಾಲಕ ರಹಿತ ಟೆಸ್ಲಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಜೀವ ದಹನ..!
ಇನ್ನಷ್ಟು ಸುಂದರವಾಗಿ ಕಾಣುವ ದುರಾಸೆಗೆ ಬಿದ್ದ ನಟಿ ಈಗ ಹೇಗಾಗಿದ್ದಾರೆ ನೋಡಿ..!