ನೈಟ್ ನ್ಯೂಸ್ ಅಪ್ಡೇಟ್
1.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಸೋಂಕು :
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಅಮಿತ್ ಶಾ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
2.
ತಂಬಾಕು, ಗುಟ್ಕಾ, ಪಾನ್ ಮಸಾಲವನ್ನು ನಿಷೇಧಿಸಿ: ಸರ್ಕಾರಕ್ಕೆ ಸಲಹೆ ನೀಡಿದ ರಾಜ್ಯಪಾಲ ವಜುಭಾಯ್ : ತಂಬಾಕು, ಗುಟ್ಕಾ, ಪಾನ್ ಮಸಾಲಾ ಮತ್ತು ಔಷಧಿಗಳಿಗಾಗಿ ಬಳಸಲಾಗುವ ಎಲ್ಲಾ ರೀತಿಯ ಮಾದಕ ವಸ್ತುಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಲು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ವಜುಭಾಯ್ ಆರ್ ವಾಲಾ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಶುಕ್ರವಾರ ಸಲಹೆ ನೀಡಿದರು.
3.
ಮೂವರು ಅನಾಥ ಮಕ್ಕಳನ್ನು ದತ್ತು ಪಡೆದ ಸೋನಾ ಸೂದ್ : ಸೋನು ಸೂದ್.!! ಕಳೆದ ಕೆಲ ತಿಂಗಳಿನಿಂದ ಹಲವಾರು ಮಾನವೀಯ ಕಾರ್ಯಗಳನ್ನು ಮಾಡಿ ಜನರಿಂದ ರಿಯಲ್ ಹೀರೋ ಎಂದು ಕರೆಸಿಕೊಳ್ಳುತ್ತಿರುವ ನಟ. ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಿರುವ ಸೋನು ಸೂದ್, ಇದೀಗ ಮೂವರು ಮಕ್ಕಳನ್ನು ದತ್ತು ಪಡೆಯುವ ಮೂಲಕ ಮತ್ತೆ ಮಾನವೀತಯತೆ ಮೆರೆದಿದ್ದಾರೆ.
4.
ಹತ್ತು ತಿಂಗಳಿಂದ ಟೀಮ್ ಇಂಡಿಯಾ ಆಟಗಾರರಿಗೆ ಸಂಬಳ ನೀಡದ ಕುಬೇರ ಬಿಸಿಸಿಐ.! : ಬಿಸಿಸಿಐ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ. ಹೇಳಿಕೊಳ್ಳಲು ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ. ವಿಶ್ವ ಕ್ರಿಕೆಟ್ ರಂಗವನ್ನು ಕೈಬೆರಳಿನಲ್ಲಿ ಆಟವಾಡಿಸುವ ತಾಕತ್ತು ಬಿಸಿಸಿಐಗಿದೆ. ಕೇವಲ ಹಣ ಬಲದಿಂದಲೇ ಕ್ರಿಕೆಟ್ ಜಗತ್ತನ್ನು ಆಳುತ್ತಿರುವ ಬಿಸಿಸಿಐಗೆ ಬಡತನವೆಂಬುದೇ ಗೊತ್ತಿಲ್ಲ.
5.
ಸೆಪ್ಟೆಂಬರ್ 4ರಿಂದ ದ್ವಿಚಕ್ರ ವಾಹನ ಬಿಐಎಸ್ ಪ್ರಮಾಣೀಕೃತ ಹೆಲ್ಮೆಟ್ ಕಡ್ಡಾಯ ? : ದ್ವಿಚಕ್ರ ವಾಹನ ಬಳಕೆದಾರರಿಗೆ ಉತ್ತಮ ಗುಣಮಟ್ಟದ ಹೆಲ್ಮೆಟ್ ಗಳನ್ನು ಕಡ್ಡಾಯಗೊಳಿಸಲು , ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮತ್ತು ಹೆದ್ದಾರಿಗಳು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕೃತ ಹೆಲ್ಮೆಟ್‌ಗಳನ್ನು ಮಾತ್ರ ಭಾರತದಲ್ಲಿ ಉತ್ಪಾದಿಸಿ ಮಾರಾಟ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.