ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಅಹೋರತ್ರಿ ಧರಣಿ
ಶಿವಮೊಗ್ಗ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಎಸ್ ಯುಐ ಕಾರ್ಯಕರ್ತರು ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಿದರು.
ಸಂತೋಷ ಪಾಟೀಲ್ ಆತ್ಮಹತ್ಯೆಗೆ ಸಚಿವ ಈಶ್ವರಪ್ಪ ಅವರು ಕಾರಣ ಅಂತ ಆರೋಪ ಮಾಡಲಾಗಿತ್ತು, ಈ ಹಿನ್ನಲೆಯಲ್ಲಿ ಎನ್ ಎಸ್ ಯುಐ ಸಂಘಟನೆಯ ಕಾರ್ಯಕರ್ತರು ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಹಾಗೂ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.
ಅಲ್ಲದೇ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಮತ್ತು ಬಂಧಿಸುವವರೆಗೂ ಧರಣಿ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.








