ಬೆಂಗಳೂರು: ಲಾಕ್‌ಡೌನ್ ನಡುವೆಯೂ ಪುತ್ರನ ಮದುವೆ ನೆರವೇರಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡೆಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂಥದ್ರಲ್ಲಿ ಲಾಕ್‌ಡೌನ್ ಮಧ್ಯೆಯೇ ಕುಮಾರಸ್ವಾಮಿ ತಮ್ಮ ಪುತ್ರನ ಮದುವೆ ಮಾಡಬೇಕು ಎಂದು ಪಟ್ಟು ಹಿಡಿದಿದ್ರು. ಹೀಗಾಗಿ, ಸರ್ಕಾರದ ವತಿಯಿಂದ ಕೆಲ ನಿಯಮಗಳನ್ನು ಕುಮಾರಸ್ವಾಮಿ ಅವರ ಕುಟುಂಬಕ್ಕೆ ತಿಳಿಸಲಾಗಿತ್ತು. ಆದ್ರೆ, ಕುಮಾರಸ್ವಾಮಿ ಅವರು ತಮ್ಮ ಪ್ರಭಾವ ಬಳಸಿ 48 ವಾಹನಗಳಿಗೆ ಅನುಮತಿ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೇ ನೂರಕ್ಕೂ ಹೆಚ್ಚು ಜನ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗ್ತಿದೆ.
ಈ ಹಿನ್ನೆಲೆಯಲ್ಲಿ ತಕ್ಷಣವೇ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುವಂತೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ
ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...








