ಪತ್ರಿಕಾ ದಿನಾಚರಣೆಯ ಶುಭ ಕೋರಿದ ನಿಖಿಲ್
ಬೆಂಗಳೂರು : ಇಂದು ಪತ್ರಿಕಾ ದಿನಾಚರಣೆ ಹಿನ್ನೆಲೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಕೊರೊನಾದಂತಹ ಗಂಭೀರ ಪರಿಸ್ಥಿತಿಯಲ್ಲೂ ಎದೆಗುಂದದೆ, ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ, ಜೀವದ ಹಂಗು ತೊರೆದು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪತ್ರಕರ್ತ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ಜೊತೆಗೆ “ವೈದ್ಯೋ ನಾರಾಯಣೋ ಹರಿಃ” ಎಂಬ ಮಾತಿನಂತೆ ಮನುಕುಲದ ರಕ್ಷಣೆಗಾಗಿ ಕೊವೀಡ್-19 ಮಾಹಾಮಾರಿಯ ವಿರುದ್ಧ ಹಗಲಿರುಳು ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಶುಭಾಶಯಗಳು ಎಂದಿದ್ದಾರೆ.
ಪತ್ರಿಕಾ ದಿನಾಚರಣೆ ನಿಮಿತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದು, ‘ನಾಡಿನ ಎಲ್ಲ ಪತ್ರಕರ್ತರಿಗೆ ಪತ್ರಿಕಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವಾಗಿರುವ ಮಾಧ್ಯಮ, ಸ್ವತಂತ್ರವಾಗಿ, ನ್ಯಾಯನಿಷ್ಠವಾಗಿ ಹಾಗೂ ಮೌಲ್ಯಯುತವಾಗಿ ಕಾರ್ಯನಿರ್ವಹಿಸುತ್ತಿರಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.









